ಶಾಲಾ ತರಗತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಆಳಂದ ಠಾಣೆಯ ಪೊಲೀಸರು ಮಲ್ಲಿಕಾರ್ಜುನನ್ನು ಬಂಧಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ್ದು, ಮೇಲ್ನೋಟಕ್ಕೆ ಸಾಬೀತಾಗಿದೆ. ರಾಜ್ಯ ನಾಗರಿಕ ನಿಯಮಗಳ ಅನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಇಲಾಖೆಯ ವಿಚಾರಣೆ ಕಾಯ್ದಿರಿಸಿ, ಮಲ್ಲಿಕಾರ್ಜುನನ್ನು ಸೇವೆಯಿಂದ ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.