ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬುಧವಾರ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಸ್ವತಂತ್ರ ಅಭ್ಯರ್ಥಿಗಳಾದ ಗವಿಸಿದ್ದಪ್ಪ ಚಂದ್ರಶೇಖರ, ಕಾಶಿನಾಥ ಎಂ.ಸೋಮಪ್ಪ, ಅಬ್ದುಲ್ ಜಬ್ಬಾರ್, ಶಶಿಧರ ಬಸವರಾಜ ಮತ್ತು ಶರಣಬಸಪ್ಪ ಶ್ರೀಮಂತಪ್ಪ ಅವರು ತಮ್ಮ ಸೂಚಕರೊಂದಿಗೆ ಚುನಾವಣಾಧಿಕಾರಿಯೂ ಆದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರಿಗೆ ನಾಮಪತ್ರಗಳ ಪ್ರತಿಗಳನ್ನು ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇಲ್ಲಿಯವರೆಗೆ 14 ಅಭ್ಯರ್ಥಿಗಳಿಂದ 17 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.