ಶನಿವಾರ, ಜೂನ್ 6, 2020
27 °C

‘ಏಕಾಗ್ರತೆಯಿಂದ ಪ್ರಗತಿ, ಯಶಸ್ಸು ಸಾಧ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕಲಬುರ್ಗಿ: ‘ಏಕಾಗ್ರತೆಯಿಂದ ಪ್ರಗತಿ, ಯಶಸ್ಸು ಗಳಿಸಲು ಸಾಧ್ಯ. ಅದಕ್ಕಾಗಿ ಯೋಗ, ಧ್ಯಾನ, ವ್ಯಾಯಾಮ ಮಾಡುವುದು ಅವಶ್ಯಕ’ ಎಂದು ಬಸವರಾಜ ಉಮರಾಣಿ ಹೇಳಿದರು.

ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಧಾರಾವಾಹಿಗಳಲ್ಲಿ ನೋಡಿರುವುದು ನೆನಪಿನಲ್ಲಿರುತ್ತದೆ. ಆದರೆ, ಹಿಂದಿನ ದಿನ ಶಾಲೆಯಲ್ಲಿ ಬೋಧಿಸಿದ ಪಾಠ ನೆನಪಿನಲ್ಲಿರುವುದಿಲ್ಲ. ವಿದ್ಯಾರ್ಥಿಗಳು ಟಿವಿ, ಮೊಬೈಲ್‌ಗಳನ್ನು ಬಳಸಬಾರದು. ಮಾನಸಿಕವಾಗಿ, ದೈಹಿಕವಾಗಿ ತರಗತಿಯಲ್ಲಿದ್ದು ವಿಷಯಗಳನ್ನು ಅರ್ಥೈಸಿಕೊಳ್ಳಬೇಕು. ಪ್ರಯತ್ನ ಮಾಡಿದಾಗ ಫಲ ದೊರಕುತ್ತದೆ. ಪ್ರಯತ್ನ ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯಾಗಿಸುತ್ತದೆ. ಸಕಾರಾತ್ಮಕವಾಗಿ ಯೋಚಿಸಿದಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಸಾಧನೆಗೆ ಅಂಗವಿಕಲತೆ ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿ. ಅಂಗವಿಕಲತೆ ಶಾಪವಲ್ಲ, ಅದೊಂದು ವರ. ಸಮಾಜ ಅಂಗವಿಕಲರಿಗೆ ಕನಿಕರ ತೋರಿಸುವುದಕ್ಕಿಂತ ಸಾಧನೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಂಡು ಗುರು-ಹಿರಿಯರಿಗೆ, ಪೋಷಕರಿಗೆ, ದೇಶಕ್ಕೆ ಕೀರ್ತಿ ತರಬೇಕು. ಉನ್ನತ ಸಾಧನೆ ಮಾಡಿ ಉತ್ತಮ ನಾಗರಿಕರಾಗಿ ಬಾಳಬೇಕು’ ಎಂದು ಸಲಹೆ ನೀಡಿದರು.

ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರಡ್ಡಿ ಪಾಟೀಲ, ಅಭಿಷೇಕ್ ಪಾಟೀಲ, ಪ್ರಶಾಂತ ಕುಲಕರ್ಣಿ, ಪೃಥ್ವಿರಾಜ ಗೌಡ, ಕರುಣೇಶ ಹಿರೇಮಠ, ಗುರುರಾಜ ಕುಲಕರ್ಣಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು