ಮಂಗಳವಾರ, ಸೆಪ್ಟೆಂಬರ್ 28, 2021
22 °C

ರಾಷ್ಟ್ರನಿರ್ಮಾಣ: ಶಿಕ್ಷಕರ ಪಾತ್ರ ಅಪಾರ- ಸಿದ್ಧಲಿಂಗ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೇವರ್ಗಿ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಸಹಸ್ರಾರು ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗೆ ಇದೆ. ಸಮಾಜದಲ್ಲಿನ ಪ್ರತಿಯೊಬ್ಬರು ಶಿಕ್ಷಕರ ವೃತ್ತಿಗೆ ತಲೆ ಬಾಗಲೇಬೇಕು ಎಂದು ಯಡ್ರಾಮಿ ವಿರಕ್ತಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಸೊನ್ನ ವಿರಕ್ತಮಠದ ಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ತಹಶೀಲ್ದಾರ್ ವಿನಯಕುಮಾರ ಪಾಟೀಲ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕಸ್ತೂರಿಬಾಯಿ ಸಾಹೇಬಗೌಡ ಕಲ್ಲಾ ಅಧ್ಯಕ್ಷತೆ ವಹಿಸಿದ್ದರು.

ಯಡ್ರಾಮಿ ತಹಶೀಲ್ದಾರ್ ಶಾಂತಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ, ತಾ.ಪಂ ಇಒ ವಿಲಾಸರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಬಿ. ಪಾಟೀಲ, ಮರೆಪ್ಪ ಮೂಲಿಮನಿ, ರುದ್ರಪ್ಪ ಚಟ್ನಳ್ಳಿ, ಬಸವರಾಜ ತೇಲಕರ್, ಶಿವರಾಜ ಸ್ವಾಮಿ, ಶ್ರೀಮಂತ ಕುಂಬಾರ ಇದ್ದರು.

ದಲಿತ ಸಮನ್ವಯ ಸಮಿತಿ ಆಕ್ರೋಶ

ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೈ ಬಿಟ್ಟಿದ್ದರಿಂದ ದಲಿತ ಸಮನ್ವಯ ಸಮಿತಿ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉದ್ದೇಶಪೂರ್ವಕವಾಗಿ ಖರ್ಗೆ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಮುಖಂಡರು ಆರೋ‍ಪಿಸಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ,  ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೈ ಬೀಡುವ ಯಾವುದೇ ಉದ್ದೇಶವಿರಲಿಲ್ಲ. ಕಣ್ತಪ್ಪಿನಿಂದ ಈ ಅಚಾತುರ್ಯವಾಗಿದೆ. ಮುಂದೆ ಈ ರೀತಿ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಸ್ಪಷ್ಟನೆ ನೀಡಿ, ಕ್ಷಮೆ ಕೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು