ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ

Last Updated 11 ಏಪ್ರಿಲ್ 2022, 4:33 IST
ಅಕ್ಷರ ಗಾತ್ರ

ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ವಿಧಾನ ಪರಿಷತ್‌ ಸದಸ್ಯ ಶಶೀಲ್‌ ಜಿ.ನಮೋಶಿ ನೇತೃತ್ವದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮನವಿಪತ್ರ ಸಲ್ಲಿಸಿದರು.

ರಸ್ತೆ ಮೂಲಕ ಸಚಿವರು ಸಿಂದಗಿಗೆ ಪ್ರಯಾಣಿಸುವ ವೇಳೆ ಪದಾಧಿಕಾರಿಗಳು ಭೇಟಿಯಾದರು.

2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅವಶ್ಯಕ, ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಅವೈಜ್ಞಾನಿಕ ಅಂಶಗಳನ್ನು ಸರಿಪಡಿಸಿ ಮರು ಆದೇಶ ಹೊರಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ತಿಳಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ‘ಸರ್ಕಾರವು ಶಿಕ್ಷಕರ ಪರ ಇದೆ. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು’ ಎಂದರು. ಸಂಸದ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT