ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ಸವಲತ್ತು ನೀಡಲು ಆಗ್ರಹಿಸಿ ನಿರಶನ

Last Updated 3 ಅಕ್ಟೋಬರ್ 2020, 7:50 IST
ಅಕ್ಷರ ಗಾತ್ರ

ಕಲಬುರ್ಗಿ: ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು, ಉಪನ್ಯಾಸಕರಿಗೆ 371 (ಜೆ) ಕಲಂನಡಿ ಸಿಗಬೇಕಾದ ಸವಲತ್ತುಗಳಿಗೆ ಒತ್ತಾಯಿಸಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ–ಕಾಲೇಜುಗಳ ಒಕ್ಕೂಟದಿಂದ ಶುಕ್ರವಾರ ಗಾಂಧಿ ಪ್ರತಿಮೆ ಎದುರು ನಿರಶನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ಬಿ.ಅಂಬಲಗಿ, ‘ಕೊರೊನಾದಲ್ಲಿ ಕಾಯನಿರ್ವಹಿಸುತ್ತಿರುವ ಶಿಕ್ಷಕ–ಉಪನ್ಯಾಸಕರಿಗೆ ತಿಂಗಳಿಗೆ ಕನಿಷ್ಠ ₹ 5 ಸಾವಿರದಂತೆ ಧನಸಹಾಯ ನೀಡಬೇಕು. ಸರ್ಕಾರಿ ಮತ್ತು ಅನುದಾನಿತ ಖಾಸಗಿ ಶಾಲಾ–ಕಾಲೇಜು ಶಿಕ್ಷಕರಿಗೆ ಉಪನ್ಯಾಸಕರಿಗೆ ಕೇಂದ್ರ ಸರ್ಕಾರದ ಸಮಾನ ವೇತನ ನೀಡಬೇಕು. 1995ರಿಂದ 2015ರ ವರೆಗೆ ಪ್ರಾರಂಭವಾದ ಅನುದಾನ ರಹಿತ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ, ಪಾಲಿಟೆಕ್ನಿಕ್, ಡಿ.ಇಡಿ., ಬಿ.ಇಡಿ. ಐಟಿಐ ಮುಂತಾದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಉಪನ್ಯಾಸಕರಿಗೆ ವೇತನಾನುದಾನ ನೀಡಬೇಕು’ ಎಂದು ಒತ್ತಾಯಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,817 ಸಾವಿರ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು. ಸಹ ಪ್ರಾಧ್ಯಾಪಕರಿಗೆ ಪ್ರಾಚಾರ್ಯರಾಗಿ ಮುಂಬಡ್ತಿ ನೀಡಬೇಕು . ಶಾಲಾ ಕಾಲೇಜುಗಳಲ್ಲಿ ಖಾಲಿ ಶಿಕ್ಷಕರ ಉಪನ್ಯಾಸಕರ ನೇಮಕಾತಿ ಮಾಡಬೇಕು. 371 (ಜೆ) ದಡಿ ಶಿಕ್ಷಕರ, ಉಪನ್ಯಾಸಕರ ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT