ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಿಸುವ ತೀರ್ಮಾನ ಐತಿಹಾಸಿಕ: ರಾಜಕುಮಾರ ಪಾಟೀಲ

Last Updated 8 ಅಕ್ಟೋಬರ್ 2022, 14:50 IST
ಅಕ್ಷರ ಗಾತ್ರ

ಕಲಬುರಗಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರ ಐತಿಹಾಸಿಕವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ನ್ಯಾ. ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್ಸಿ ಸಮುದಾಯಕ್ಕೆ ಶೇ 15ರಿಂದ ಶೇ 17 ‌ಹಾಗೂ ಎಸ್ಟಿ ಸಮುದಾಯಕ್ಕೆ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸುವ ಮುಖಾಂತರ ಸಮುದಾಯದ ಬೇಡಿಕೆಗೆ ಸ್ಪಂದಿಸಿದಂತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ ಎಂದು ಮನಗಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಬದಲಾವಣೆ ತರಲು ಸಮಾನ ಅವಕಾಶಗಳನ್ನು ನೀಡಿದಾಗ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರು ಮೇಲೆ ಬರುತ್ತಾರೆ. ಆ ಅವಕಾಶವೇ ಇಲ್ಲದಿದ್ದರೆ, ತುಳಿತಕ್ಕೆ ಒಳಪಟ್ಟರೆ, ತಲೆಮಾರುಗಳು ಕಷ್ಟಪಡುವಂತಾದರೆ ಎಂದಿಗೂ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯಲ್ಲಿ ಹೆಚ್ಚಳ ಮಾಡುವ ಅವಕಾಶ ಹಾಗೂ ಸಂಕಲ್ಪವನ್ನು ನೆರವೇರಿಸಿರುವುದು ಸಾಮಾನ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT