ಕಲಬುರಗಿ: ಸೆಪ್ಟಂಬರ್ 3ರಂದು ನಡೆಯಲಿರುವ ಟಿಇಟಿ ಪರೀಕ್ಷೆಗೆ ನಗರದ ಇಟಗಾ ಕ್ರಾಸ್‌ನಲ್ಲಿರುವ ಶ್ರೀಗುರು ವಿದ್ಯಾಪೀಠದ ವಸತಿ ಸಹಿತ ಶಾಲೆ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜು, ಖಣದಾಳ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳಿಗೆ ರಾಮಮಂದಿರ ವೃತ್ತದಿಂದ ಬಸ್ ವ್ಯವಸ್ಥೆಗೊಳಿಸಲಾಗಿದೆ.
ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹೀಗಾಗಿ ಅಭ್ಯರ್ಥಿಗಳು, ತಮ್ಮ ಹೆಸರು ಮತ್ತು ವಿಳಾಸವನ್ನು 805–805–6969 ನಂಬರ್‌ಗೆ ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸುವ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಬಸ್ ಮತ್ತು ಊಟದ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀಗುರು ವಿದ್ಯಾಪೀಠ ಸಂಸ್ಥೆ ಅಧ್ಯಕ್ಷ ಬಸವರಾಜ ದಿಗ್ಗಾವಿ ಹಾಗೂ ಕಾರ್ಯದರ್ಶಿ ಶಿವರಾಜ ದಿಗ್ಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.