ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಟಿಇಟಿ

Published 1 ಜುಲೈ 2024, 5:50 IST
Last Updated 1 ಜುಲೈ 2024, 5:50 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಬೆಳಿಗ್ಗೆ ನಗರದ 30 ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನ 52 ಕೇಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಮತ್ತು ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ವ್ಯವಸ್ಥಿತವಾಗಿ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ಜಿ.ಬಿರಾದಾರ ತಿಳಿಸಿದರು.

ಬೆಳಿಗ್ಗೆ ನಡೆದ ಪರೀಕ್ಷೆಗೆ(ಪತ್ರಿಕೆ–1ಕ್ಕೆ) ಒಟ್ಟು 8,706 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 970 ಜನ ಗೈರಾಗಿದ್ದು, 7,736 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಮಧ್ಯಾಹ್ನ ನಡೆದ ಪರೀಕ್ಷೆಗೆ(ಪತ್ರಿಕೆ–2ಕ್ಕೆ) 14,590 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1,005 ಜನ ಗೈರಾದರೆ, 13,585 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲ್ಯಾಪ್‌ಟಾಪ್‌ ಜೋಡಿಸಿ ಪರೀಕ್ಷಾ ಕೇಂದ್ರಗಳನ್ನು ಅವಲೋಕನ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಮೇಲುಸ್ತುವಾರಿಗಾಗಿ ಸಿಬ್ಬಂದಿಯನ್ನು ಕೂಡ ನೇಮಿಸಲಾಗಿತ್ತು ಎಂದು ಡಿಡಿಪಿಐ ಮಾಹಿತಿ ನೀಡಿದರು.

ಕಲಬುರಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಟಿಇಟಿ ಬರೆಯಲು ಬಂದ ಅಭ್ಯರ್ಥಿಗಳು–ಪ್ರಜಾವಾಣಿ ಚಿತ್ರ
ಕಲಬುರಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಟಿಇಟಿ ಬರೆಯಲು ಬಂದ ಅಭ್ಯರ್ಥಿಗಳು–ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT