ಸಿರಿಧಾನ್ಯದ ಕೃಷಿ ಅಗ್ಗದ ಖರ್ಚಿನ ಕೃಷಿಯಾಗಿದೆ. ಧಾನ್ಯಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಸಿರಿಧಾನ್ಯ ಕೃಷಿಯ ಉತ್ತೇಜನಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಅವುಗಳ ಲಾಭ ಪಡೆಯಬೇಕು.
–ಸಮದ್ ಪಟೇಲ್, ಜಂಟಿ ಕೃಷಿ ನಿರ್ದೇಶಕ
ಸಿರಿಧಾನ್ಯಗಳಿಗೆ ಮಾರುಕಟ್ಟೆ ಇಲ್ಲ. ಜಿಲ್ಲೆಯಲ್ಲಿ ಬೆಳೆಯುವ ಬೇರೆ ಕೃಷಿ ಉತ್ಪನ್ನಗಳಿಗೆ ಹೋಲಿಸಿದರೆ ಇವುಗಳ ದರ ಕಡಿಮೆ ಇದೆ. ಆದ್ದರಿಂದ ರೈತರು ಜಿಲ್ಲೆಯಲ್ಲಿ ಆ ಬೆಳೆಗಳನ್ನು ಬೆಳೆಯುವುದು ಕಡಿಮೆ ಮಾಡಿದ್ದಾರೆ.