ಕಲಬುರಗಿ: ಅತಿ ವಿರಳವಾದ ಮತ್ತು ಬದುಕುವ ಸಾಧ್ಯತೆ ಕಡಿಮೆ ಇರುವ ಉಸಿರಾಟದ ಸಮಸ್ಯೆಯಿಂದ ಬಳಲುತಿದ್ದ ನವಜಾತ ಶಿಶುವಿನ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದ ಮತ್ತು ಅರವಳಿಕೆ ತಜ್ಞರು ಮಾಡಿದ್ದಾರೆ.

ಮಕ್ಕಳ ಶಸ್ತ್ರ ಚಿಕಿತ್ಸಕರಾದ ಡಾ.ಶರಣ್ ಗುಬ್ಬಿ, ಡಾ. ಪ್ರತಿಮಾ ಎನ್., ಡಾ.ರೂಪಾ ಮಂಗಶೆಟ್ಟಿ ತಂಡ ಕಠಿಣ ಹಾಗೂ ಸೂಕ್ಷ್ಮ ಶಸ್ತ್ರಚಿಕಿತ್ಸೆ ಮಾಡಿ ಮಗುವನ್ನು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ. ಸರ್ಕಾರದ ಆಯುಷ್ಮಾನ್ ಭಾರತ ಯೋಜನೆಯಡಿ ಮಗುವಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

‘ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಇಂತಹ ಶಸ್ತ್ರ ಚಿಕಿತ್ಸೆ ಅತ್ಯಂತ ವಿರಳ. ಸಮಯಕ್ಕೆ ಸರಿಯಾಗಿ ಹಾಗೂ ಕಾಯಿಲೆಯನ್ನು ಗುರುತಿಸಿ ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದರಿಂದ ಮಗುವಿನ ರಕ್ಷಣೆ ಮಾಡಿದ ವೈದ್ಯ ಸಿಬ್ಬಂದಿ ಕಾರ್ಯ ಕ್ಷಮತೆ ಮೆಚ್ಚುವಂತಹದ್ದು’ ಎಂದು ಸಂಸ್ಥೆಯ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಉಪಾಧ್ಯಕ್ಷ ರಾಜಾ ಬಿ.ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಬಸವೇಶ್ವರ ಆಸ್ಪತ್ರೆಯ ಸಂಚಾಲಕ ಡಾ.ಕಿರಣ್ ದೇಶಮುಖ್ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.