ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳಂದ: ರಥಯಾತ್ರೆಗೆ ಅನುಮತಿ ನೀಡಲು ವಿಳಂಬ ಮಾಡುತ್ತಿರು ಸರ್ಕಾರ

Published 3 ಮಾರ್ಚ್ 2024, 15:59 IST
Last Updated 3 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಆಳಂದ: ‘ರಾಘವ ಚೈತನ್ಯ ಶಿವಲಿಂಗದ ದರ್ಶನಕ್ಕಾಗಿ ಕೈಗೊಂಡ ರಥಯಾತ್ರೆಗೆ ಹೈಕೋರ್ಟ್‌ ಅನುಮತಿ ನೀಡಿದರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ ಆರೋಪಿಸಿದರು.

ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ಹಿಂದೂ ಜಾಗರಣಾ ವೇದಿಕೆ ಹಾಗೂ ರಾಘವ ಚೈತನ್ಯ ಶಿವಲಿಂಗದ ಜೀರ್ಣೋದ್ದಾರ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡ ರಾಘವಚೈತನ್ಯ ಶಿವಲಿಂಗ ರಥಯಾತ್ರೆ ಉದ್ದೇಶಿಸಿ ಮಾತನಾಡಿದರು.

‘ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಶಿವಲಿಂಗದ ಪೂಜೆ, ದರ್ಶನಕ್ಕೆ ಅನುಮತಿ ನೀಡಲಾಗಿತ್ತು, ಆದರೆ ಈಗ ಪೂಜೆ ಕೈಗೊಳ್ಳಲು ಅನುಮತಿಗೆ ವಿಳಂಬ ಮಾಡಲಾಗುತ್ತಿದೆ’ ಎಂದರು.

ಮಾಡಿಯಾಳದ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.

ಮಾಡಿಯಾಳದ ಸೋಮಶೇಖರ ಒಡೆಯರ, ಹಿಂದೂ ಜಾಗರಣ ವೇದಿಕೆ ಸಂಚಾಲಕ ನಾಗೇಂದ್ರ ಕಬಾಡೆ, ಆನಂದರಾವ ಪಾಟೀಲ, ಮಲ್ಲಿಕಾರ್ಜುನ ತಡಕಲ, ಶರಣಗೌಡ ಪಾಟೀಲ, ನಿಂಗಣ್ಣಾ ಕಂಬಾರ, ಪ್ರಭು ಸರಸಂಬಿ ಉಪಸ್ಥಿತರಿದ್ದರು.

ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತವದಲ್ಲಿ ರಾಘವ ಚೈತನ್ಯ ರಥಯಾತ್ರೆಯು ಜರುಗಿತು.
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತವದಲ್ಲಿ ರಾಘವ ಚೈತನ್ಯ ರಥಯಾತ್ರೆಯು ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT