ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ ಶುಕ್ರವಾರ (ಫೆ.20) ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಸಮಗ್ರ ಬುದ್ಧಿಮತ್ತೆ ಮತ್ತು ಸಂವಹನ ವ್ಯವಸ್ಥೆಗಳ 3ನೇ ಅಂತರಾಷ್ಟ್ರೀಯ ಸಮ್ಮೇಳನ ಆಯೋಜಿಸಲಿದೆ ಎಂದು ಸಮ್ಮೇಳನದ ಚಾಲನಾ ಸಮಿತಿ ಅಧ್ಯಕ್ಷರೂ ಆಗಿರುವ ವಿಶ್ವವಿದ್ಯಾಲಯದ ಕುಲಸಚಿವೆ ಲಕ್ಷ್ಮಿ ಪಾಟೀಲ ಮಾಕಾ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು, ‘ವಿಶ್ವದ ಮತ್ತು ದೇಶದ ವಿವಿಧ ಭಾಗಗಳಿಂದ ಹಿರಿಯ ಪ್ರಾಧ್ಯಾಪಕರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಮತ್ತು ವಿವಿಧ ತಾಂತ್ರಿಕ ಅಧಿವೇಶನಗಳಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ವಿ.ವಿ.ಯ ಕುಲಾಧಿಪತಿ ದಾಕ್ಷಾಯಣಿ ಎಸ್. ಅಪ್ಪ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ ಸಾನ್ನಿಧ್ಯದಲ್ಲಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಪೋರ್ಚುಗಲ್ನ ಲಿಸ್ಬನ್ನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ಡಿಇ ಟೆಲಿಕಮ್ಯುನಿಕೇಷನ್ನ ಹಿರಿಯ ಸಂಶೋಧಕ ಡಾ.ರೊಡಾಲ್ಫೊ ಒಲಿವೇರ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ಕೂಲ್ ಆಫ್ ಕಂಪ್ಯೂಟಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿಯರಿಂಗ್ನ ಡಾ.ದಿನೇಶ್ ಸಿಂಗ್, ಫಿಲಿಪೈನ್ಸ್ನ ಮನಿಲಾದ ಟೆಕ್ನಾಲಜಿಕಲ್ ಯೂನಿವರ್ಸಿಟಿ ಆಫ್ ಫಿಲಿಪ್ಪಿನ್ಸ್ನ ಡಾ. ಲೀನ್ ಕಾರ್ಲೊ ಸ್ಯಾಂಟೋಸ್ ಟೊಲೆನ್ಷನ್ ಸೇರಿದಂತೆ ಇತರ ಪ್ರಮುಖರು ಭಾಷಣ ಮಾಡಲಿರುವರು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.