ಶುಕ್ರವಾರ, ಮೇ 14, 2021
27 °C

ಕೋವಿಡ್-‌19: ಕಲಬುರ್ಗಿಯಲ್ಲಿ ಭಾಗಶಃ ಲಾಕ್‌ಡೌನ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: 21ರಿಂದ ಮೇ 4ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದಲ್ಲಿ ಪೂರ್ಣ ಪ್ರಮಾಣದ ಕರ್ಫ್ಯೂ ಎಂದು ಮುಂಚೆ ಘೋಷಣೆ ಮಾಡಿದ್ದರೂ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವುದರಿಂದ ಇನ್ನಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ನಗರದ ವಿವಿಧೆಡೆ ಗುರುವಾರ ಮಧ್ಯಾಹ್ನದಿಂದ ಅಂಗಡಿಗಳನ್ನು ಬಂದ್ ಮಾಡಿಸಿವೆ.

ಇದರಿಂದಾಗಿ ನಗರದೆಲ್ಲೆಡೆ ಅಘೋಷಿತ ಲಾಕ್‌ಡೌನ್ ಜಾರಿಗೆ ಬಂದಂತಾಯಿತು. ಬೇಕರಿಗಳನ್ನೂ ಬಂದ್ ಮಾಡಿಸಲಾಗಿದ್ದು, ಹೋಟೆಲ್‌ಗಳಲ್ಲಿ ಪಾರ್ಸೆಲ್ ಒಯ್ಯಲು ಮಾತ್ರ ಅನುಮತಿ ನೀಡಲಾಗಿದೆ. ಕಿರಾಣಿ ಅಂಗಡಿ, ಔಷಧಿ ಅಂಗಡಿ, ಆಸ್ಪತ್ರೆ ಹಾಗೂ ಸಾರಿಗೆ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗಿಲ್ಲ.

ಬಹುತೇಕ ವಾಣಿಜ್ಯ ವಹಿವಾಟು ಸ್ಥಗಿತಗೊಂಡಿದ್ದರಿಂದ ನಗರದ ರಸ್ತೆಗಳಲ್ಲಿ ಜನಸಂಚಾರವೂ ವಿರಳವಾಗಿತ್ತು. ಬಸ್‌ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡು ಬಂತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು