ಶನಿವಾರ, ಏಪ್ರಿಲ್ 17, 2021
23 °C

ಕಲಬುರ್ಗಿ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಗ್ರಾಮ ಪಂಚಾಯಿತಿ ಚುನಾವಣೆಯ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ್ದಕ್ಕಾಗಿ ಕಲಬುರ್ಗಿ ತಾಲ್ಲೂಕಿನ ಕಪನೂರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಸ್‌.ಆರ್‌. ಕಟ್ಟಿಮನಿ ಹಾಗೂ ಕಮಲಾಪುರ ತಾಲ್ಲೂಕಿನ ಕಲಮೂಡ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಂಡೆಪ್ಪ ಡಿ. ಬೇನೂರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಇಬ್ಬರೂ ಮುಖ್ಯ ಶಿಕ್ಷಕರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು. ಈ ಕುರಿತು ಆಯೋಜಿಸಿದ್ದ ತರಬೇತಿಗೆ ಗೈರಾಗಿದ್ದರು. ಶಿಸ್ತು ಕ್ರಮ ಕೈಗೊಳ್ಳಲು ಕಲಬುರ್ಗಿ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಶಿಫಾರಸು ಮಾಡಿದ್ದರು. ಆ ಶಿಫಾರಸು ಆಧರಿಸಿ ಅಮಾನತುಗೊಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು