‘ಕಳ್ಳತನ ಪ್ರಕರಣಗಳ ತಡೆಗೆ ಈಗಾಗಲೇ ರಾತ್ರಿ ವೇಳೆಯ ಗಸ್ತು ಹೆಚ್ಚಳ ಮಾಡಿ ಜನರಲ್ಲಿ ಜಾಗೃತಿಯೂ ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ‘ಪ್ರಜಾವಾಣಿ’ಗೆ ತಿಳಿಸಿದರು. ‘ಪ್ರತಿ ತಿಂಗಳು ಸಭೆ ನಡೆಸಿ ಕಳ್ಳತನ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಕೃತ್ಯ ನಡೆದ 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಸಾರ್ವಜನಿಕರಿಗೆ ಯಾರಾದರು ಅನುಮಾನಾಸ್ಪದವಾಗಿ ಓಡಾಡುವುದು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದರು.