‘ವಂಚನೆ ಮರುಕಳಿಸದಂತೆ ಕ್ರಮಕ್ಕೆ ಮುಂದಾಗಿ’
ಪೋರ್ಟಲ್‌ನಲ್ಲಿರುವ ಫಲಾನುಭವಿಗಳ ವಿವರ ವಂಚಕರ ಕೈಗೆ ಸೋರಿಕೆಯಾಗಿದ್ದು ಹೇಗೆ ಎಂಬ ಬಗ್ಗೆ ಸರ್ಕಾರ ತನಿಖೆ ಮಾಡಿಸಬೇಕು. ಇಂತಹ ವಂಚನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಸಂಘದ ಜಿಲ್ಲಾ ಉಪಾಧ್ಯಕ್ಷೆ ಶೇಖಮ್ಮ ಕುರಿ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಂಚಾಲಕ ವಿ.ಜಿ.ದೇಸಾಯಿ ಆಗ್ರಹಿಸಿದ್ದಾರೆ.