ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಲ್ಲಿ ಸಿಲುಕಿದವರು ಶೀಘ್ರ ಸ್ವದೇಶಕ್ಕೆ: ಸಂಸದ ಉಮೇಶ ಜಾಧವ

Published 28 ಫೆಬ್ರುವರಿ 2024, 16:10 IST
Last Updated 28 ಫೆಬ್ರುವರಿ 2024, 16:10 IST
ಅಕ್ಷರ ಗಾತ್ರ

ಕಲಬುರಗಿ: ಯುದ್ಧ ಪೀಡಿತ ರಷ್ಯಾ- ಉಕ್ರೇನ್ ಗಡಿಯಲ್ಲಿ ಸಿಲುಕಿರುವ ಜಿಲ್ಲೆಯ ಮೂವರು ಸೇರಿ ಒಟ್ಟು ಆರು ಯುವಕರ ಬಿಡುಗಡೆಗೆ ಭಾರತೀಯ ರಾಯಭಾರ ಕಚೇರಿ ಹಾಗೂ ರಷ್ಯಾ ರಾಜತಾಂತ್ರಿಕರ ನಡುವೆ ಮಾತುಕತೆ ಪ್ರಗತಿಯಲ್ಲಿದ್ದು, ಶೀಘ್ರವೇ ಭಾರತೀಯ ಯುವಕರು ತವರಿಗೆ ವಾಪಸಾಗುವರು ಎಂದು ಸಂಸದ ಡಾ. ಉಮೇಶ ಜಾಧವ ಹೇಳಿದರು.

ರಷ್ಯಾದಲ್ಲಿ ಸಿಲುಕಿದ್ದ ಯುವಕರ ಕುಟುಂಬದವರನ್ನು ತಮ್ಮ ಗೃಹ ಕಚೇರಿಗೆ ಕರೆಯಿಸಿಕೊಂಡು ಸಾಂತ್ವನ ಹೇಳಿದ ಜಾಧವ, ವಿದೇಶಾಂಗ ಖಾತೆಯ ಹೆಚ್ಚುವರಿ ಕಾರ್ಯದರ್ಶಿ ಅವರು ರಷ್ಯಾದ ವಿದೇಶಾಂಗ ರಾಜತಾಂತ್ರಿಕ ಅಧಿಕಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಬಿಡುಗಡೆ ಪ್ರಕ್ರಿಯೆ ಚುರುಕುಗೊಂಡಿದೆ. ರಷ್ಯಾದ ಅಧಿಕಾರಿಗಳಿಂದ ಉತ್ತಮ ಸ್ಪಂದನೆಯೂ ಸಿಕ್ಕಿದೆ ಎಂ‌ದರು.

ಭಾರತದಲ್ಲಿರುವ ರಷ್ಯಾ ರಾಯಭಾರ ಕಚೇರಿಯ ಜೊತೆ ನಿರಂತರ ಸಂಪರ್ಕ ಇರಿಸಿಕೊಂಡಿದ್ದೇನೆ. ಯಾವುದೇ ಕ್ಷಣದಲ್ಲೂ ಬಿಡುಗಡೆ ಮಾಹಿತಿ ಲಭ್ಯವಾಗಲಿದೆ. ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಯುವಕರ ಪೋಷಕರಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT