ಗುರುವಾರ , ಮಾರ್ಚ್ 30, 2023
22 °C

ಕಲಬುರಗಿ: ಖಾಲಿ ನಿವೇಶನದಲ್ಲಿ ತೋಡಿದ್ದ ಗುಂಡಿಯಲ್ಲಿ ಮುಳುಗಿ 3 ಮಕ್ಕಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

iStock Photo

ಕಲಬುರಗಿ: ಖಾಲಿ ನಿವೇಶನದಲ್ಲಿ ತೋಡಿದ್ದ ಗುಂಡಿಯಲ್ಲಿ ಮುಳುಗಿ ಮೂವರು ಮಕ್ಕಳು ಬುಧವಾರ ಮೃತಪಟ್ಟಿದ್ದಾರೆ.
ವಿಘ್ನೇಶ್ (11), ಪ್ರಶಾಂತ್ (11) ಮತ್ತು ದರ್ಶನ್ ಮೃತಪಟ್ಟವರು.

ನಗರದ ಬ್ರಹ್ಮಪುರ ಅಪ್ಪರ್‌ಲೇನ್‌ ಪ್ರದೇಶದ ನಿವಾಸಿಗಳಾದ ಮಕ್ಕಳು ಆಟವಾಡಲು ಹೋಗಿದ್ದಾಗ ಮಹಾಲಕ್ಷ್ಮಿ ಲೇಔಟ್‌ನ ವಿವೇಕಾನಂದ ಕಾಲೇಜಿನ ಹಿಂಭಾಗದ ಗುಂಡಿಯಲ್ಲಿ ಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಬರುವಷ್ಟರಲ್ಲಿ ಮಕ್ಕಳು ಮೃತಪಟ್ಟಿದ್ದರು.
ಮಂಗಳವಾರ ರಾತ್ರಿ ಸುರಿದ ಮಳೆಗೆ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ನಗರ ಜಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹಗಳನ್ನು ಹಸ್ತಾಂತರಿಸಲಾಯಿತು. ಆಸ್ಪತ್ರೆ ಬಳಿ ಮಕ್ಕಳ ಪೋಷಕರು, ಸಂಬಂದಿಗಳ ಆಕ್ರಂದ ಮುಗಿಲು ಮುಟ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು