ಮಂಗಳವಾರ, ಜನವರಿ 26, 2021
16 °C
ಬೈಕಿಗೆ ಅಪರಿಚಿತ ವಾಹನ ಡಿಕ್ಕಿ; ನಸುಕಿನಲ್ಲಿ ಸಂಭವಿಸಿದ ಅಪಘಾತ

ಅಪಘಾತ: ಬಾಲಕಿ, ಇಬ್ಬರು ಯುವಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ (ಕಲಬುರ್ಗಿ ಜಿಲ್ಲೆ): ಚಿತ್ತಾಪುರ‌ ತಾಲ್ಲೂಕಿನ ವಾಡಿ ಸಮೀಪದ ರಾವೂರ ಹೊರವಲಯದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬ ಬಾಲಕಿ ಹಾಗೂ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ (20), ಅಕ್ಬರ್ ಗೂಡು ಪಟೇಲ್ (19) ಹಾಗೂ ಭಾಗ್ಯಶ್ರೀ ಬಸವರಾಜ (14) ಮೃತಪಟ್ಟವರು. ಈ ಮೂವರೂ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ನಸುಕಿನ 1 ಗಂಟೆ ಸುಮಾರಿಗೆ ಯಾವುದೋ ವಾಹನ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೂವರೂ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬೆಳಿಗ್ಗೆ ಇತರ ವಾಹನಗಳು ಈ ದಾರಿಯಲ್ಲಿ ಬಂದಾಗ ಪ್ರಕರಣ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿಯಲ್ಲಿ ಈ ಮೂವರೂ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು ಎಂಬ ಬಗ್ಗೆ ಪೊಲೀಸರಿ ಮಾಹಿತಿ ನೀಡಿಲ್ಲ. ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವಗಳ ಪಂಚನಾಮೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿ ಸಲಾಯಿತು. ಆಸ್ಪತ್ರೆಯ ಮುಂದೆ ಮೃತರ ಕುಟುಂಬದವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು