ಮೂರು ಸಲ ಮುಖ್ಯಮಂತ್ರಿ ಹುದ್ದೆ ತಪ್ಪಿದೆ: ಖರ್ಗೆ

ಸೋಮವಾರ, ಏಪ್ರಿಲ್ 22, 2019
31 °C

ಮೂರು ಸಲ ಮುಖ್ಯಮಂತ್ರಿ ಹುದ್ದೆ ತಪ್ಪಿದೆ: ಖರ್ಗೆ

Published:
Updated:
Prajavani

ಕಲಬುರ್ಗಿ: ‘ಬೇರೆ ಬೇರೆ ಕಾರಣಗಳಿಂದಾಗಿ ನನಗೂ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿದೆ. ಹಾಗಂತ ನಾನೇನಾದರೂ ಬಹಿರಂಗವಾಗಿ ಮಾತನಾಡಿದ್ದೇನೆಯೇ, ಪಕ್ಷದ ವಿರುದ್ಧ ಮುನಿಸಿಕೊಂಡಿದ್ದೇನೆಯೇ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

ತಾಲ್ಲೂಕಿನ ಪಟ್ಟಣ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ನನಗೆ ಪಕ್ಷ ಹಾಗೂ ಅದರ ಸಿದ್ಧಾಂತಗಳು ಮುಖ್ಯವಾಗಿವೆ. ಆದರೆ, ನಮ್ಮ ಪಕ್ಷದಿಂದ ಹೊರಗೆ ಹೋದವರು ಸಿದ್ಧಾಂತಗಳನ್ನು ಪಾಲಿಸದೆ ಈಗ ಸಂವಿಧಾನ ವಿರೋಧಿ ಪಕ್ಷದಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡಿದರೆ ಅವರ ಜನಪರ ಕಾಳಜಿ ತಿಳಿಯುತ್ತದೆ’ ಎಂದು ವ್ಯಂಗ್ಯವಾಡಿದರು.

‘ಅಭಿವೃದ್ಧಿ ಪರ ಕೆಲಸಗಳೇ ನನ್ನನ್ನು 11 ಸಲ ಗೆಲ್ಲುವಂತೆ ಮಾಡಿವೆ. ಹೀಗಾಗಿ ಮೋದಿ ಕಲಬುರ್ಗಿಗೆ ಬಂದಾಗ ನನ್ನ ಬಗ್ಗೆ ಮಾತನಾಡಿಲ್ಲ. ಆದರೆ, ಮೋದಿಯ ಇಲ್ಲಿನ ಮರಿಗಳು ನನ್ನ ಬಗ್ಗೆ ಮಾತನಾಡುತ್ತಿವೆ. ನನ್ನ ವಿರುದ್ಧ ಹೊರಟಿರುವವರು ತಾವೇ ಮೊದಲು ಸೋತು ಸುಣ್ಣವಾಗಿದ್ದಾರೆ. ನನ್ನನ್ನು ಸೋಲಿಸುವ ಮಾತನಾಡುತ್ತಿದ್ದಾರೆ’ ಎಂದು ಕುಟುಕಿದರು.

‘ಪ್ರಧಾನಿ ನರೇಂದ್ರ ಮೋದಿ ದೇಶಭಕ್ತಿಯ ಮಾತುಗಳನ್ನಾಡುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಹೋರಾಡಿ ತ್ಯಾಗ ಮಾಡಿದಾಗ ಮೋದಿ ಹುಟ್ಟೇ ಇರಲಿಲ್ಲ’ ಎಂದು ಜರಿದರು.

‘ದೇಶದ ಐಕ್ಯತೆಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಿದ್ಧಾಂತಗಳು ಮಾರಕವಾಗಿವೆ. ಈ ಚುನಾವಣೆಯಲ್ಲಿ ಅಂತಹ ಶಕ್ತಿಗಳನ್ನು ದಮನ ಮಾಡಬೇಕು’ ಎಂದು ಮತದಾರರಿಗೆ ಹೇಳಿದರು.

ಬರಹ ಇಷ್ಟವಾಯಿತೆ?

 • 26

  Happy
 • 2

  Amused
 • 1

  Sad
 • 0

  Frustrated
 • 7

  Angry

Comments:

0 comments

Write the first review for this !