ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪಿಸಿ: ತಿಪ್ಪಣ್ಣಪ್ಪ ಕಮಕನೂರ

Published 14 ಡಿಸೆಂಬರ್ 2023, 15:55 IST
Last Updated 14 ಡಿಸೆಂಬರ್ 2023, 15:55 IST
ಅಕ್ಷರ ಗಾತ್ರ

ಕಲಬುರಗಿ: ಬಸವಣ್ಣನವರೊಂದಿಗೆ ಸಾಮಾಜಿಕ ಕ್ರಾಂತಿಯಲ್ಲಿ ತೊಡಗಿಸಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಬೆಂಗಳೂರಿನಲ್ಲಿ ಯಾವುದಾದರೂ ಒಂದು ಪ್ರತಿಷ್ಠಿತ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಬೇಕು’ ಎಂದು ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮನವಿ ಮಾಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬಸವಣ್ಣ, ವಾಲ್ಮೀಕಿ, ಕನಕದಾಸ, ಕೆಂಪೇಗೌಡರು ಸೇರಿದಂತೆ ಮಹಾನ್ ವ್ಯಕ್ತಿಗಳ ಮೂರ್ತಿಗಳನ್ನು ಬೆಂಗಳೂರಿನಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಬಸವಣ್ಣನವರ ಜತೆಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದ ಅಂಬಿಗರ ಚೌಡಯ್ಯನವರ ಮೂರ್ತಿಯನ್ನೂ ಪ್ರತಿಷ್ಠಾಪನೆ ಮಾಡಬೇಕು. ಈ ಮೂಲಕ ಟೊಕರೆ ಕೋಳಿ, ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಗಂಗಾಮತಸ್ಥ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಡಬೇಕು ಎಂದರು.

ಕರ್ನಾಟಕದಲ್ಲಿ ನಮ್ಮ ಸಮುದಾಯದ 60 ಲಕ್ಷ ಜನರು ಇದ್ದರೂ ಮತಕ್ಕೆ ಸೀಮಿತ ಮಾಡಿಕೊಳ್ಳಲಾಗಿತ್ತು. ನಮ್ಮ ಸಮಾಜಕ್ಕೆ ಸುಳ್ಳು ಹೇಳಿ ಮತ ಪಡೆದಿದ್ದರು. ಈಗ ಬುದ್ಧಿವಂತರಾಗಿದ್ದಾರೆ. ಪ್ರತಿಷ್ಠಿತ ಜಾಗದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಕೋಲಿ ಭವನಕ್ಕೆ ₹ 2 ಕೋಟಿ ಕೊಡಬೇಕು. ಇದು ಇವತ್ತೇ ನಿರ್ಧಾರ ಆಗಬೇಕು ಎಂದು ಕೋರಿದರು. ಕಮಕನೂರ ಅವರ ವಾದವನ್ನು ಮೆಚ್ಚಿದ ಸಚಿವ ಪ್ರಿಯಾಕ್ ಖರ್ಗೆ, ‘ಬೆಂಗಳೂರು ಅಲ್ಲ ಕಲಬುರಗಿಯಲ್ಲೂ ಆಗುತ್ತದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ, ‘ವಿಧಾನಸೌಧದ ಸುತ್ತ, ಶಾಸಕರ ಭವನದ ಮುಂದೆ ಸಾಕಷ್ಟು ಮೂರ್ತಿಗಳು ಪ್ರತಿಷ್ಠಾನೆಯಾಗಿವೆ. ಚೌಡಯ್ಯನರ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳ ಪರಿಶೀಲನೆ ಮಾಡಿ, ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಬಳಿ ಪ್ರತಿಮೆ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ‘ ಎಂದು ಕಮಕನೂರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT