ಕಲಬುರಗಿ: ಕಾರ್ಖಾನೆಗೆ ರೈತರ ಕಬ್ಬು ಸಾಗಾಣಿಕೆ ಮಾಡುತ್ತಿರುವ ವಾಹನಗಳ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಟೊಲ್ ನಾಕಾದಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಸಣ್ಣೂರು ಟೊಲ್ ನಾಕಾ ಬಂದ ಮಾಡಿ ಪ್ರತಿಭಟನೆ ನಡೆಸಲಾಯಿತು.

‘ಸಣ್ಣೂರು ಟೊಲ್ ನಾಕಾ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಾಣಿಕೆ ಮಾಡುತ್ತಿರುವ ರೈತರ ಹತ್ತಿರ ಹಣ ವಸೂಲಿ ಮಾಡಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ ಪ್ರೆಸ್ವೇಗಳಲ್ಲಿ ಟೋಲ್ ದರವನ್ನು ಶೇ 4ರಿಂದ ಶೇ 5ರಷ್ಟು ಹೆಚ್ಚಳ ಮಾಡಿದ್ದು, ಮಂಗಳವಾರದಿಂದಲೇ ಜಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೀತಿಯು ಜನಸಾಮಾನ್ಯರ ಬದುಕನ್ನು ಮತ್ತಷ್ಟು ದುಸ್ಥರಗೊಳಿಸಿದೆ’ ಎಂದು ಆಪಾದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ವೀರಣ್ಣ ಗಂಗಾಣಿ, ದಿಲೀಪ ನಾಗೂರೆ, ಶರಣಪ್ಪ ಪೂಜಾರಿ ವಚ್ಚಾ, ಜಾಫರ್ ಖಾನ್ಸಾಬ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.