ಮಂಗಳವಾರ, ಜೂನ್ 22, 2021
28 °C

ಶವ ಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ ಅಪಘಾತ;‌ ಮಹಿಳೆ ಸಾವು, 15 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಶವ ಸಂಸ್ಕಾರಕ್ಕೆ ಜನರನ್ನು ಹತ್ತಿಸಿಕೊಂಡು ಹೊರಟಿದ್ದ ಟ್ರ್ಯಾಕ್ಟರ್‌ ಚಿಂಚೋಳಿ ತಾಲ್ಲೂಕಿನ ಕಲ್ಲೂರು ರೋಡ್‌ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಈ ವೇಳೆ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ತೀವ್ರ ಬಿಸಿಲಿನ ಕಾರಣ ಟ್ರ್ಯಾಕ್ಟರ್‌ನ ಟೈರ್‌ ಸಿಡಿದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಮಳಖೇಡದ ಯಲ್ಲಮ್ಮ ಭೀಮರಾವ್ (40) ಮೃತಪಟ್ಟವರು. ಇದೇ ಗ್ರಾಮದ ಇನ್ನೂ 15 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.‌

ಚಿಂಚೋಳಿ ತಾಲ್ಲೂಕಿನ ಕಲ್ಲೂರು ರೋಡ್‌ ಗ್ರಾಮದಲ್ಲಿ ಪರಿಚಯಸ್ಥರೊಬ್ಬರು ಶನಿವಾರ ಮೃತಪಟ್ಟಿದ್ದರು. ಅವರ ಶವ ಸಂಸ್ಕಾರಕ್ಕೆ ಸೇಡಂ ತಾಲ್ಲೂಕಿನ ಮಳಖೇಡದಿಂದ 23 ಮಂದಿ ಹೊರಟಿದ್ದರು. ಟ್ರ್ಯಾಕ್ಟರ್‌ನ ಟ್ರಾಲಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದಾಗ, ಮಧ್ಯಾಹ್ನ 12ರ ಸುಮಾರಿಗೆ ಬಿಸಿಲಿನ ಝಳಕ್ಕೆ ರಸ್ತೆ ಕಾದು ಟೈರ್‌ ಸಿಡಿದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ರಸ್ತೆ ಬದಿಗೆ ಉರುಳಿತು ಎಂದು ಅದರಲ್ಲಿ ಪ್ರಯಾಣಿಸುತ್ತಿದ್ದವರೇ ಮಾಹಿತಿ ನೀಡಿದ್ದಾರೆ.

ಗಾಯಗೊಂಡವರನ್ನು ಚಿಂಚೋಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿರಿಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು