ಕಲಬುರ್ಗಿ: ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ಸಹಯೋಗದಲ್ಲಿಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ವ್ಯಾಪ್ತಿಯ 33 ತಾಲ್ಲೂಕು ಕೇಂದ್ರಗಳಲ್ಲಿ ಟಿಇಟಿ ಗೆ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಕೆಕೆಆರ್ಡಿಬಿ ಕಾರ್ಯದರ್ಶಿ ಸುಬೋಧ ಯಾದವ್ ತಿಳಿಸಿದರು.

ಇಲ್ಲಿನ ಬಿ.ಇಡಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಟಿಇಟಿ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

371 (ಜೆ) ಅಡಿ ಇಲ್ಲಿನ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಇರುವುದರಿಂದ ಇಲ್ಲಿನವರು ಶಿಕ್ಷಕರ ಹುದ್ದೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ತರಬೇತಿ ನೀಡಲಾಗುತ್ತದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ನಳಿನ್ ಅತುಲ್ ಮಾತನಾಡಿದರು.

ತರಬೇತಿಯಲ್ಲಿ ಭಾವಗಹಿಸಿದ್ದ ವಿದ್ಯಾರ್ಥಿಗಳು ಇಂಗ್ಲಿಷ್, ವಿಜ್ಞಾನ, ಗಣಿತ ವಿಷಯದೊಂದಿಗೆ ಮನಃಶಾಸ್ತ್ರ ವಿಷಯದ ತರಬೇತಿಯೂ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಹನಿರ್ದೇಶಕ ವಿಜಯಕುಮಾರ, ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ನಿರ್ದೇಶಕ ಟಿ. ನಾರಾಯಣಗೌಡ, ಶಿಕ್ಷಣ ತಜ್ಞ ಎನ್.ಬಿ.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.