ಭಾನುವಾರ, ಅಕ್ಟೋಬರ್ 24, 2021
23 °C
ಬೆಂಗಳೂರಿನಿಂದ ಆನ್‌ಲೈನ್‌ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರ್ಗಿ: ಜನಪ್ರತಿನಿಧಿಗಳ ತರಬೇತಿ ಕಟ್ಟಡ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಸಮೀಪದ ಕೆಸರಟಗಿ ಗ್ರಾಮದಲ್ಲಿ ನಿರ್ಮಿಸಿದ ಅಬ್ದುಲ್ ನಜೀರ್‌ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಂಗಳೂರಿನಿಂದ ಆನ್‌ಲೈನ್‌ನಲ್ಲಿ ಉದ್ಘಾಟನೆ ಮಾಡಿದರು.

ಶಾಸಕ ಬಸವರಾಜ ಮತ್ತಿಮೂಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಇದೇ ಸಮಯಕ್ಕೆ ಕೆಸರಟಗಿಯಲ್ಲಿ ಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗರಾಜ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಪ್ರಭಾರಿ ಅಧೀಕ್ಷಕ ಎಂಜಿನಿಯರ್‌ ಶೇಖ್‌ ಸಲೀಮುದ್ದಿನ್‌, ಸಹಾಯಕ ಕಾರ್ಯನಿರ್ವಾಕ ಎಂಜಿನಿಯರ್‌ ಜಾಫರ್‌ ಅಹ್ಮದ್‌ ಹಾಗೂ ಸಿಬ್ಬಂದಿ ವರ್ಗದವರು ಸಾಂಕೇತಿಕವಾಗಿ ಕಟ್ಟಡಕ್ಕೆ ಪೂಜೆ ಸಲ್ಲಿಸಿದರು.

ಯಾರಿಗೆ ಪ್ರಯೋಜನ?: ಕಲಬುರ್ಗಿ ಪ್ರಾದೇಶಿಕ ವ್ಯಾಪ‍್ತಿಗೆ ಬರುವ ಎಲ್ಲ ಆರೂ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ನೀಡುವುದು ಈ ಸಂಸ್ಥೆಯ ಕೆಲಸ. ಈ ಮುಂಚೆ ಇಂಥ ತರಬೇತಿಗಾಗಿ ಜನಪ್ರತಿನಿಧಿಗಳನ್ನು ಮೈಸೂರಿನಲ್ಲಿರುವ ಸಂಸ್ಥೆಯ ಮುಖ್ಯ ಕಚೇರಿಗೆ ಕಳುಹಿಸಲಾಗುತ್ತಿತ್ತು. ಇದಕ್ಕಾಗಿಯೇ ಈಗ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ.

ಕಟ್ಟಡದ ವಿಶೇಷತೆ ಏನು?: ಸರಿಯಾಗಿ 3.5 ಎಕರೆ ವಿಸ್ತೀರ್ಣದಲ್ಲಿ 43525 ಚದರ್‌ ಅಡಿ ಅಳತೆಯ ಕಟ್ಟಡವಿದೆ. ₹ 9 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ. ₹ 7.5 ಕೋಟಿ ವೆಚ್ಚದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ₹ 1.5 ಕೋಟಿ ವೆಚ್ಚದಲ್ಲಿ ಜಿಲ್ಲಾ ಪಂಚಾಯತ್ ಸಂಪನ್ಮೂಲ ತರಬೇತಿ ಕೇಂದ್ರವನ್ನು ಈ ಒಂದೇ ಕಟ್ಟಡದಲ್ಲಿ ನಿರ್ಮಿಸಲಾಗಿದೆ.

ನೆಲ ಮಹಡಿಯಲ್ಲಿ ಗ್ರಂಥಾಲಯ, ಆಡಳಿತ ಕೋಣೆ, 5 ಸಾಮಾನ್ಯ ಕೋಣೆ, ಅಡುಗೆ ಕೋಣೆ, ಶೌಚಾಲಯಗಳಿವೆ. ಮೊದಲನೇ ಮಹಡಿಯಲ್ಲಿ 2 ತರಬೇತಿ ಸಭಾಂಗಣ, 2 ಅತಿಥಿಗೃಹ, 12 ಸಾಮಾನ್ಯ ಕೋಣೆ ಮತ್ತು ಸಾಮಾನ್ಯ ಶೌಚಾಲಯಗಳಿವೆ. ಎರಡನೇ ಮಹಡಿಯಲಿ 100 ಜನ ತಂಗುವಷ್ಟು ಸಾಮರ್ಥ್ಯದ 2 ಡಾರ್ಮಿಟರಿ, 12 ಸಾಮಾನ್ಯ ಕೋಣೆ, ಕಂಪ್ಯೂಟರ್ ತರಬೇತಿ ಕೇಂದ್ರವಿದೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು