ಗುರುವಾರ , ಆಗಸ್ಟ್ 5, 2021
21 °C

ಇನ್ನೂರು ಸಸಿನೆಡಲು ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ನಗರೇಶ್ವರ ವೆಲ್‍ಫೇರ್ ಸೊಸೈಟಿ ಹಾಗೂ ಜಿಲ್ಲಾ ಸೇವಾ ಸಮಿತಿ ಆಶ್ರಯದಲ್ಲಿ ಗುರುವಾರ ನಗರೇಶ್ವರ ಶಾಲೆಯ ಆವರಣದಲ್ಲಿ 200 ಸಸಿಗಳನ್ನು ನಡೆಸುವ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್‌.ಎಂ. ಮಹೇಶ್ವರಯ್ಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು‌ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರೇಶ್ವರ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಮೈಲಾಪೂರ, ಗೌರವ ಕಾರ್ಯದರ್ಶಿ ರವೀಂದ್ರ ಮುಕ್ಕಾ, ಡಾ.ರಾಜಶ್ರೀ ಪಾಲಾದಿ, ರೋಟರಿ ಕ್ಲಬ್‌ ಅಧ್ಯಕ್ಷ ಪ್ರದೀಪ ಮೂರಡಕರ್, ಆರಾಧನಾ ಸಂಸ್ಥೆಯ ಕಾರ್ಯದರ್ಶಿ ಚೇತನ್‍ಕುಮಾರ ಗಾಂಗಜೀ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಸಿ ನೆಟ್ಟರು.

ಶಾಲೆಯ ಮೂರು ವಿಭಾಗದ ಎಲ್ಲ ಸಿಬ್ಬಂದಿ ಕೂಡ ಇದರಲ್ಲಿ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.