ಗುರುವಾರ , ಆಗಸ್ಟ್ 18, 2022
25 °C

ಕಲಬುರಗಿ| ಲಾರಿ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನಗರದ ರಾಮಮಂದಿರ ವೃತ್ತದ ಬಳಿ ಮಂಗಳವಾರ ಸಂಜೆ ಲಾರಿ ಹಾಯ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಸಿರನೂರ ಗ್ರಾಮದ ಅಂಬವ್ವ ಕುಂಬಾರ (59) ಮೃತರು. ನಾಗನಹಳ್ಳಿ ಕ್ರಾಸ್‌ನಿಂದ ಬಂದ ಲಾರಿ ಜೇವರ್ಗಿಯತ್ತ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ರಸ್ತೆ ಬಳಿ ನಿಂತಿದ್ದ ಅಂಬವ್ವ ಅವರಿಗೆ ಹಿಂದಿನ ಚಕ್ರ ಹಾಯ್ದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಬೋರಂಪಳ್ಳಿ ಗ್ರಾಮದ ರಾಮಲಿಂಗ ಮಾಧವರಾವ್‌ ಎಂಬುವನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.  ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು