ಗುರುವಾರ , ಡಿಸೆಂಬರ್ 8, 2022
18 °C

ಕಳವು: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಇಲ್ಲಿನ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದ ಕಳವು ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಿಲತ್ ನಗರದ ನಿವಾಸಿ ತಾಹಿರಾ ಬೇಗಂ ಆಯುಬ್ ಖಾನ್(46) ಮತ್ತು ಪರ್ವೀನ್ ಬೇಗಂ(29) ಬಂಧಿತ ಆರೋಪಿಗಳು. ಅವರಿಂದ ₹3 ಲಕ್ಷ ವೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಚಿನ್ ಚಲವಾದಿ ನೇತೃತ್ವದಲ್ಲಿ ಸಿಬ್ಬಂದಿ ಸವಿತಾ, ಜ್ಯೋತಿ, ತಾತ್ವಿಕಾ ಪಾಟೀಲ, ಶಿವಪ್ರಕಾಶ, ಸಂತೋಷ, ಕಲ್ಯಾಣ ಕುಮಾರ, ರಾಮು ಪವಾರ ತನಿಖಾ ತಂಡದಲ್ಲಿ ಇದ್ದರು.

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು