ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ದಿನ ಪೊಲೀಸ್ ಕಸ್ಟಡಿಗೆ ರಾಜು ಕಪನೂರ

Last Updated 5 ಡಿಸೆಂಬರ್ 2022, 16:34 IST
ಅಕ್ಷರ ಗಾತ್ರ

ಕಲಬುರಗಿ: ಅಕ್ರಮವಾಗಿ ಪಿಸ್ತೂಲ್ ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಕಾಂಗ್ರೆಸ್ ಮುಖಂಡ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ ಅವರನ್ನು ಜೇವರ್ಗಿಯ ಜೆಎಂಎಫ್‌ಸಿ ಕಿರಿಯ ಶ್ರೇಣಿ ನ್ಯಾಯಾಲಯ ಎರಡು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.

ತನ್ನ ಕೊಲೆಗೆ ಕಾಂಗ್ರೆಸ್ ಪ್ರಭಾವಿ ಶಾಸಕರೊಬ್ಬರ ಸಹಚರರು ಸಂಚು ರೂಪಿಸಿದ್ದು, ಗನ್ ಖರೀದಿಸಿದ್ದಾರೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. ಆಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜು ಕಪನೂರ ಹೆಸರು ಕೇಳಿ ಬಂದಿದ್ದರಿಂದ ಯಡ್ರಾಮಿ ಠಾಣೆ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದರು.

ತನ್ನಿಂದ ಎರಡು ಗನ್ ಮತ್ತು 30 ಜೀವಂತ‌ ಗುಂಡುಗಳನ್ನು ರಾಜು ಕಪನೂರ ಖರೀದಿ ಮಾಡಿದ್ದಾರೆ ಎಂದು ಆರೋಪಿ ಗುರುಲಿಂಗಪ್ಪ ಪೊಲೀಸರ ಮುಂದೆ ನೀಡಿರುವ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದ. ಈ ಬಗ್ಗೆ ವಿಚಾರಣೆಗಾಗಿ ಪೊಲೀಸರು ಎರಡು ಬಾರಿ ನೋಟಿಸ್ ನೀಡಿದ್ದರು. ನೋಟಿಸ್‌ಗೆ ಉತ್ತರ ನೀಡದ್ದಕ್ಕಾಗಿ ಪೊಲೀಸರು ಶನಿವಾರ ರಾಜು ಕಪನೂರ ಅವರನ್ನು ವಶಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT