ಶನಿವಾರ, ಜನವರಿ 16, 2021
28 °C

ಬೈಕ್– ಟಂಟಂ ಡಿಕ್ಕಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ತಾಪುರ: ರಾವೂರು ರಸ್ತೆಯಲ್ಲಿ ಗುರುವಾರ ರಾತ್ರಿ ಟಂಟಂ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಲ್ಲೂರ್ ಬಿ. ಗ್ರಾಮದ ಮಹಾದೇವ ಅಣಿವೀರಪ್ಪ (45) ಮತ್ತು ಲಕ್ಷ್ಮಿಪುರ ಗ್ರಾಮದ ಮನೋಹರ ಉಮ್ಲಾ ರಾಠೋಡ (35) ಮೃತರು. ಚಿತ್ತಾಪುರದಿಂದ ವಾಡಿ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಹಾಗೂ ರಾವೂರ ಮಾರ್ಗದಿಂದ ಎದುರಿಗೆ ಹೊರಟಿದ್ದ ಬೈಕ್‌ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ಪಟ್ಟಣದಿಂದ 2 ಕಿ.ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ಮುಂದಾದರು. ಆದರೆ, ತೀವ್ರ ರಕ್ತದ ಮಡುವಿನಲ್ಲಿ ಬಿದ್ದ ಬೈಕ್‌ ಸವಾರರಿಬ್ಬರೂ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ ಮತ್ತು ಪಿಎಸ್ಐ ಶ್ರೀಶೈಲ ಅಂಬಾಟಿ ಸ್ಥಳಕ್ಕೆ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.