ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಶಹಾಬಾದ್‌ನಲ್ಲಿ ಎರಡು ಎಕ್ಸ್‌ಪ್ರೆಸ್ ರೈಲು ನಿಲುಗಡೆ

Last Updated 17 ನವೆಂಬರ್ 2021, 15:35 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಶಹಾಬಾದ್‌ ರೈಲು ನಿಲ್ದಾಣದಲ್ಲಿ ನಿಲುಗಡೆ ರದ್ದುಗೊಳಿಸಿದ್ದ ಹುಬ್ಬಳ್ಳಿ–ಹೈದರಾಬಾದ್ ಎಕ್ಸ್‌ಪ್ರೆಸ್‌ (07319/ 07320) ಹಾಗೂ ಮುಂಬೈ–ನಾಗರಕೊಯಿಲ್ (06339/ 06340) ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಗೆ ರೈಲ್ವೆ ಮಂಡಳಿ ಇದೇ 19ರಿಂದ ಅವಕಾಶ ಕಲ್ಪಿಸಿದೆ.

‌ಕಳೆದ ವಾರ ನವದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದ ಸಂಸದ ಡಾ. ಉಮೇಶ ಜಾಧವ್ ಅವರು ಶಹಾಬಾದ್‌ನಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು 19ರಂದು ರೈಲ್ವೆ ನಿಲುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಜಾಧವ್, ‘ಈ ರೈಲುಗಳ ಜೊತೆಗೆ ಮುಂಬೈ–ಹೈದರಾಬಾದ್ ಎಕ್ಸ್‌ಪ್ರೆಸ್‌ ಹಾಗೂ ಮುಂಬೈ–ವಿಶಾಖಪಟ್ಟಣಂ ರೈಲುಗಳ ನಿಲುಗಡೆ ತುಂಬಾ ಅಗತ್ಯವಾಗಿದೆ. ಇದನ್ನೂ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಕೆಲವೇ ದಿನಗಳಲ್ಲಿ ಈ ರೈಲುಗಳು ನಿಲುಗಡೆಯಾಗುವ ವಿಶ್ವಾಸವಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT