ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KEA ನೇಮಕಾತಿ ಅಕ್ರಮ: ಪಾಟೀಲಗೆ ಫ್ಲ್ಯಾಟ್ ಬಾಡಿಗೆ ಕೊಟ್ಟ ಮಾಲೀಕ ಸೇರಿ ಇಬ್ಬರ ಬಂಧನ

Published 9 ನವೆಂಬರ್ 2023, 23:30 IST
Last Updated 9 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಕಿಂಗ್‌ಪಿನ್ ಆರ್.ಡಿ. ಪಾಟೀಲನ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳದೆ ಫ್ಲ್ಯಾಟ್ ಬಾಡಿಗೆ ನೀಡಿದ ಅಪಾರ್ಟ್‌ಮೆಂಟ್ ಮಾಲೀಕ ಶಂಕರಗೌಡ ರಾಮಚಂದ್ರ ಯಾಳವಾರ ಹಾಗೂ ಅಲ್ಲಿನ ಸೂಪರ್ ವೈಸರ್ ಮತ್ತು ಸೆಕ್ಯೂರಿಟಿ ನೋಡಿಕೊಳ್ಳುತ್ತಿದ್ದ ಶಹಾಬಾದ್ ಮೂಲದ ದಿಲೀಪ್ ಪವಾರ ಎಂಬುವವರನ್ನು ಅಫಜಲಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ಆರ್.ಡಿ.ಪಾಟೀಲ ಬಗ್ಗೆ ಮಾಧ್ಯಮಗಳಲ್ಲಿ ಇಷ್ಟೊಂದು ಚರ್ಚೆ ನಡೆಯುತ್ತಿದ್ದರೂ ಮನೆ ನೀಡಿದ ಆರೋಪ ಮತ್ತು ಪೊಲೀಸರಿಗೆ ಮಾಹಿತಿ ನೀಡದೆ ಕಿಂಗ್‌ಪಿನ್ ತಲೆ ಮರೆಸಿಕೊಳ್ಳಲು ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್ಪಿ ಶ್ರೀನಿಧಿ, ಡಿವೈಎಸ್ಪಿ ಗೋಪಿ ಮಾರ್ಗದರ್ಶನದಲ್ಲಿ ಸಿಪಿಐ ಪಂಡಿತ ಸಗರ ಹಾಗೂ ಸಿಬ್ಭಂದಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ನಗರ ಠಾಣೆ ಪೊಲೀಸರು ಪಾಟೀಲನ ಸಹಚರ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದ ಶಿವರಾಜ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT