ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಪ್ರತ್ಯೇಕ ಪ್ರಕರಣ: ಹಳೆ ವೈಷಮ್ಯಕ್ಕೆ ಇಬ್ಬರ ಕೊಲೆ

Published 7 ಫೆಬ್ರುವರಿ 2024, 4:47 IST
Last Updated 7 ಫೆಬ್ರುವರಿ 2024, 4:47 IST
ಅಕ್ಷರ ಗಾತ್ರ

ಕಲಬುರಗಿ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಳೆ‌‌ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ರೋಹನ್ ವಾಕಡೆ (22) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಟ್ಟಿಗೆಯಿಂದ ಹೊಡೆದು ಕೊಲೆ

ಕಲಬುರಗಿ ತಾಲ್ಲೂಕಿನ ಭೀಮಳ್ಳಿ ಗ್ರಾಮ ಸಮೀಪ ಮಶಾಕ್ ಮಕ್ಕಸ್‌ (40) ಅವರನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ.

ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಶಾಕ್‌ನನ್ನು ಹಳೆ ವೈಷಮ್ಯಕ್ಕೆ ಕೊಲೆ ಮಾಡಿರಬಹುದು. ಆರೋಪಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಬ್‌ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ

ಜೇವರ್ಗಿ ತಾಲ್ಲೂಕಿನ ನಿರನಕೋಡ ಗ್ರಾಮದಲ್ಲಿ ಮಂಗಳವಾರ ರಾತ್ರಿ ತಂದೆ ಮತ್ತು ಇಬ್ಬರು ಮಕ್ಕಳ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಲಾಗಿದೆ.

ಶೇಶಪ್ಪಪ್ಪಗೌಡ, ಕನ್ಮಯ್ಯ ಮತ್ತು ಬಿಳಿಯಾನ ಸಿದ್ದ ಒಡೆಯರ್ ಹಲ್ಲೆಗೆ ಒಳಗಾದ‌ವರು. ಬಿಳಿಯಾನ ಸಿದ್ದ ಒಡೆಯರ್‌ ಅವರ ಇಬ್ಬರು ಸಹೋದರರು ಮತ್ತು ಅವರ ಮಕ್ಕಳು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಯೋಗಿಯಪ್ಪ ಒಡೆಯರ್, ಮಲ್ಲಪ್ಪ ಒಡೆಯರ್‌, ಸಿದ್ದರಾಮ , ಲಕ್ಷ್ಮಿಪುತ್ರ, ಸೋಮಲಿಂಗ್ ಭೂತನ ಸಿದ್ದ ಒಡೆಯರ್ ಹಲ್ಲೆ ಮಾಡಿದ ಆರೋಪಿಗಳು.‌

ಮಲ್ಲಪ್ಪ ಒಡೆಯರ್ ಹೆಸರಲ್ಲಿ ಇರುವ ಮೂರು ಎಕರೆ ಜಮೀನು ಪೈಕಿ ಒಂದೂವರೆ ಎಕರೆ ಜಮೀನು ನೀಡುವಂತೆ‌ ಬಿಳಿಯಾನ‌ಸಿದ್ದ ಕೇಳಿದ್ದ. ಜಮೀನು ಕೇಳಿದಕ್ಕೆ ತಂದೆ ಮತ್ತು ಮಕ್ಕಳ ಮೇಲೆ ಹಲ್ಲೆ ಮಾಡಲಾಗಿದೆ.‌ ತೀವ್ರವಾಗಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT