ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಗಂಧ ಮರ ಸಾಗಣೆ: ಇಬ್ಬರ ಬಂಧನ

ಅರಣ್ಯದಲ್ಲಿ ಕತ್ತರಿಸಿ ತಂದ ₹ 8 ಲಕ್ಷ ಬೆಲೆ ಬಾಳುವ ಶ್ರೀಗಂಧ ಮರದ ತುಂಡುಗಳ ವಶ
Last Updated 30 ಅಕ್ಟೋಬರ್ 2020, 4:09 IST
ಅಕ್ಷರ ಗಾತ್ರ

ಕಲಬುರ್ಗಿ: ಸುಮಾರು ₹ 8 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಶ್ರೀಗಂಧದ ಮರವನ್ನು ಕತ್ತರಿಸಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು, ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಳ್ಳಿ ತಾಂಡಾ ನಿವಾಸಿ ರವಿ ಜಯಸಿಂಗ್ ಜಾಧವ ಹಾಗೂ ಶಿವಾಜಿ ವಿಠಲ ಜಾಧವ ಬಂಧಿತ ಆರೋಪಿಗಳು. ಇವರು ಕಲಬುರ್ಗಿ ತಾಲ್ಲೂಕಿನ ಮಾಲಗತ್ತಿ ಗ್ರಾಮದ ಹೊರವಲಯದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕತ್ತರಿಸಿ, ತುಂಡು ಮಾಡಿ ವಾಹನದಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದಿದ್ದರಿಂದ ಅರಣ್ಯಾಧಿಕಾರಿಗಳು ವಾಹನ ತಡೆದು ತಪಾಸಣೆ ನಡೆಸಿದರು. ಪ್ರಾದೇಶಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಸುಶೀಲಕುಮಾರ ಚವ್ಹಾಣ, ಉಪವಲಯ ಅರಣ್ಯಾಧಿಕಾರಿ ಕಾಶಿನಾಥ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾದರು.

ಬಂಧಿತರಿಂದ ₹ 8 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 78.80 ಕೆ.ಜಿ ತೂಕದ ಶ್ರೀಗಂಧ ಮರದ ತುಂಡುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT