ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಕೊಲೆ

Published 7 ಏಪ್ರಿಲ್ 2024, 13:13 IST
Last Updated 7 ಏಪ್ರಿಲ್ 2024, 13:13 IST
ಅಕ್ಷರ ಗಾತ್ರ

ಕಲಬುರಗಿ: ತಾಲ್ಲೂಕಿನ ತಾವರಗೇರಾ ಕ್ರಾಸ್ ಸಮೀಪ ಭಾನುವಾರ ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ಕೆ.ಕೆ. ನಗರದ ನಿವಾಸಿ ಶರಣಮ್ಮ (51) ಹಾಗೂ ತಾಜ್‌ಸುಲ್ತಾನ್‌ಪುರ ನಿವಾಸಿ ಚಂದಮ್ಮ (53) ಕೊಲೆಯಾದವರು. ನಗರದ ಗಂಜ್‌ ಪ್ರದೇಶದಿಂದ ಬಸ್‌ನಲ್ಲಿ ಕೆಲಸಕ್ಕಾಗಿ ಹೋಗಿದ್ದರು. ತಾವರಗೇರಾ ಕ್ರಾಸ್ ಸಮೀಪ ಇಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ತಲೆ, ಮುಖದ ಮೇಲೆ ಗಾಯಗಳಾಗಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸಬ್‌ಅರ್ಬನ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT