ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೌದ್ಧ ಧರ್ಮದ ಬಗೆಗಿನ ಮಾಹಿತಿ ಕೇಳಿದ ಯುಜಿಸಿ

Last Updated 3 ಮಾರ್ಚ್ 2021, 2:30 IST
ಅಕ್ಷರ ಗಾತ್ರ

ಕಲಬುರ್ಗಿ: ಬೌದ್ಧ ಧರ್ಮವನ್ನು ಜಾಗತಿಕವಾಗಿ ಇನ್ನಷ್ಟು ಪಸರಿಸುವ ನಿಟ್ಟಿನಲ್ಲಿ ಹಾಗೂ ಪಾಲಿ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಆದ ಪ್ರಯತ್ನಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಮುಂದಾಗಿದ್ದು, ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿದೆ.

ಈ ಸಂಬಂಧ ಯುಜಿಸಿ ಕಾರ್ಯದರ್ಶಿ ಪ್ರೊ. ರಿತೇಶ್ ಜೈನ್ ಅವರು ಬರೆದಿರುವ ‍ಪತ್ರದಲ್ಲಿ, ‘ಭಾರತ ಸರ್ಕಾರವು ಹಲವಾರು ಕ್ರಮಗಳ ಮೂಲಕ ವಿಶ್ವದಲ್ಲೇ ಭಾರತವನ್ನು ಬೌದ್ಧ ಧರ್ಮದ ಪ್ರಮುಖ ಕೇಂದ್ರವನ್ನಾಗಿಸಲು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಮುಂದಾಗಿದೆ. ಆದ್ದರಿಂದ ಮಾನವ ಸಂಪನ್ಮೂಲ ಸಚಿವಾಲಯವು ವಿವಿಧ ವಿಶ್ವವಿದ್ಯಾಲಗಳಲ್ಲಿರುವ ಬುದ್ಧ ಹಾಗೂ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಕೋರ್ಸುಗಳು, ನಡೆದಿರುವ ವಿಚಾರ ಸಂಕಿರಣಗಳು, ಪಾಲಿ ಭಾಷೆಯ ಅಧ್ಯಯನ ಸೇರಿದಂತೆ ಈ ನಿಟ್ಟಿನಲ್ಲಿ ನಡೆಸಿದ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT