ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಅನಧಿಕೃತ ಕೋಚಿಂಗ್‌ ಸೆಂಟರ್‌: ವರದಿ ಕೇಳಿದ ಆಯೋಗ

Published 7 ಜೂನ್ 2024, 16:06 IST
Last Updated 7 ಜೂನ್ 2024, 16:06 IST
ಅಕ್ಷರ ಗಾತ್ರ

ಕಲಬುರಗಿ: ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ಕ್ರಮಕೈಗೊಂಡಿರುವ ಕುರಿತು ಜಿಲ್ಲಾವಾರು ಮಾಹಿತಿ ಒದಗಿಸುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಶುಕ್ರವಾರ ಪತ್ರ ಬರೆದಿದ್ದಾರೆ.

‘ಈ ಕುರಿತು ಈಗಾಗಲೇ ಇಲಾಖೆಗೆ ಪತ್ರ ಬರೆಯಲಾಗಿದ್ದು, ಜೂನ್‌ ಅಂತ್ಯದೊಳಗೆ ಬಿಇಒಗಳ ಕಚೇರಿಯಿಂದ ಅನಧಿಕೃತ ಕೋಚಿಂಗ್ ಕೇಂದ್ರಗಳ ಪಟ್ಟಿ ಮಾಡಿ, ಸಂಬಂಧಿಸಿದ ಅಧಿಕಾರಿಗಳ ತಂಡ ರಚಿಸಿ, ಅವುಗಳ ತೆರವಿಗೆ ನಿಗದಿತ ಅವಧಿಯಲ್ಲಿ ಕ್ರಮವಹಿಸಿ ಆಯೋಗಕ್ಕೆ ವರದಿ ನೀಡಲು ಸೂಚಿಸಲಾಗಿತ್ತು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT