ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುನೈಟೆಡ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ಕೋವಿಡ್ ಲಸಿಕೆ

Last Updated 3 ಸೆಪ್ಟೆಂಬರ್ 2021, 4:43 IST
ಅಕ್ಷರ ಗಾತ್ರ

ಕಲಬುರ್ಗಿ: ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಕೋವಿಡ್‌ ವಿರುದ್ಧ ರಕ್ಷಣೆ ನೀಡುವಲ್ಲಿ ಹೆಚ್ಚು ಪರಿಣಾಮಕಾರಿ ಎನಿಸಿದ ಸ್ಪುಟ್ನಿಕ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಚೇರಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ವಿಕ್ರಂ ಸಿದ್ದಾರೆಡ್ಡಿ ತಿಳಿಸಿದ್ದಾರೆ.

ಜಾಗತಿಕವಾಗಿ 60 ದೇಶಗಳಲ್ಲಿ ಸ್ಪುಟ್ನಿಕ್ ಲಸಿಕೆಯನ್ನು ನೀಡಲಾಗುತ್ತಿದ್ದು, ಕೋವಿಡ್ ತಡೆಯುವಲ್ಲಿ ಶೇ 92ರಷ್ಟು ಪರಿಣಾಮಕಾರಿ ಎಂದು ತಜ್ಞರು ಹೇಳಿದ್ದಾರೆ. ಕೇವಲ 21 ದಿನಗಳಲ್ಲಿ ಎರಡೂ ಡೋಸ್‌ಗಳನ್ನು ಪಡೆಯುವ ಮೂಲಕ ಕೋವಿಡ್‌ನಿಂದ ರಕ್ಷಣೆ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಲಸಿಕೆಯನ್ನು ವೈಜ್ಞಾನಿಕವಾಗಿ ಆಸ್ಪತ್ರೆಯಲ್ಲಿ ಸಂಗ್ರಹಿಸಲಾಗಿದ್ದು, ಆಸಕ್ತರು ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಪಡೆಯಬಹುದು. ಹೆಸರು ನೋಂದಾಯಿಸಿಕೊಳ್ಳಲು 08472 225006 ಅಥವಾ 94831 51515 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT