ಸೋಮವಾರ, ಮೇ 10, 2021
21 °C
ಸುತ್ತೋಲೆ ಹಿಂ‍ಡೆದ ಗುಲಬರ್ಗಾ ವಿಶ್ವವಿದ್ಯಾಲಯ, ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಜಯ

ಅನುತ್ತೀರ್ಣರಾದರೂ ಪರೀಕ್ಷೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಪದವಿಯ ಕೊನೆ ಸೆಮಿಸ್ಟರ್‌ ಪರೀಕ್ಷೆ ಬರೆಯಲು ಉಳಿದೆಲ್ಲ ಸೆಮಿಸ್ಟರ್‌ಗಳನ್ನು ಪಾಸ್‌ ಮಾಡಲೇಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಹೊರಡಿಸಿದ ಸುತ್ತೋಲೆಯನ್ನು ಹಿಂಪಡೆದಿದೆ.

ಪ್ರಥಮ ಸೆಮಿಸ್ಟರ್‌ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ 5ನೇ ಸೆಮಿಸ್ಟರ್ ಹಾಗೂ ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್‌ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ 6ನೇ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ.

2021ನೇ ಸಾಲಿನಲ್ಲಿ ಅಧ್ಯಯನ ನಿರತ 5ನೇ ಮತ್ತು 6ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕೋವಿಡ್‌ ಕಾರಣ ಎಲ್ಲ ವಿದ್ಯಾರ್ಥಿಗಳು ಮುಂಚಿತವಾಗಿ ಮಾಹಿತಿ ಲಭ್ಯವಾಗದ ಕಾರಣ, ಈ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಶರಣಪ್ಪ ಕೋಟೆಪ್ಪಗೋಳ ಅವರು ತಿಳಿಸಿದ್ದಾರೆ.‌

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.