ಮಂಗಳವಾರ, ಮೇ 17, 2022
26 °C

ಕಲ್ಯಾಣ ಕರ್ನಾಟಕ: ವೇತನಾನುದಾನಕ್ಕೆ ಆಗ್ರಹಿಸಿ ಶಾಲೆಗಳ ಬಂದ್ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕು ಸುಲೇಪೇಟದ ನಿರ್ಮಲ ಜ್ಞಾನ ಶಾಲೆಯನ್ನು ಸೋಮವಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು

ಕಲಬುರ್ಗಿ: ವೇತನಾನುದಾನ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಹಾಗೂ ಜಿಲ್ಲೆಯಲ್ಲಿನ ಅನುದಾನ ರಹಿತ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಬಂದ್ ಮಾಡಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಕರೆ ನೀಡಿದ್ದ ಒಂದು ದಿನದ ಬಂದ್‌ಗೆ ನಗರ ಹಾಗೂ ಜಿಲ್ಲೆಯ ಬಹುಪಾಲು  ಖಾಸಗಿ ಅನುದಾನ ರಹಿತ ಶಾಲೆಗಳು ಸ್ಪಂದಿಸಿ, ಆಟ-ಪಾಠಗಳನ್ನು ನಿಲ್ಲಿಸಿದವು.

ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸ್ವತಃ ತಾವೇ  ತಮ್ಮ ಶಾಲೆಗಳಿಗೆ ಬೀಗ ಹಾಕಿ ಆವರಣದ ಮುಂದೆ ಧರಣಿ ನಡೆಸಿದರು.ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ನೂರಂದೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸೋಮವಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು

ಶಾಲೆ ಬಂದ್ ಮಾಡುವುದಾಗಿ ಹೋರಾಟಗಾರರು ಮುಂಚೆಯೇ ತಿಳಿಸಿದ್ದರು. ಅಲ್ಲದೇ, ಆಯಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮೊಬೈಲ್ ಮೂಲಕ ಪಾಲಕರಿಗೆ ಸಂದೇಶ ಕಳುಹಿಸಿದ್ದರು. ಹೀಗಾಗಿ, ಸೋಮವಾರ ಮಕ್ಕಳು ಕೂಡ ಶಾಲೆಗಳಿಗೆ ಬರಲಿಲ್ಲ. 

ಕಲ್ಯಾಣ ಕರ್ನಾಟಕ ಭಾಗದ ಎಲ್ಲ 1500 ಕನ್ನಡ ಶಾಲೆಗಳು ಹಾಗೂ 2000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನೂ ಬಂದ್ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು