ಬುಧವಾರ, ಡಿಸೆಂಬರ್ 8, 2021
27 °C

ಕಲಬುರ್ಗಿ ಮೂಲದ ಸ್ಪರ್ಶಾ 443ನೇ ರ‍್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಸ್ಪರ್ಶಾ ನೀಲಂಗಿ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 443ನೇ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. 2017ರ ಪರೀಕ್ಷೆಯಲ್ಲಿ 805ನೇ ರ್‍ಯಾಂಕ್ ಪಡೆದಿದ್ದ ಸ್ಪರ್ಶಾ ಅವರು ಪ್ರಸ್ತುತ ಅಸ್ಸಾಂನಲ್ಲಿ ಐಆರ್‌ಟಿಎಸ್‌ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಪಿಯುಸಿವರೆಗೆ ಕಲಬುರ್ಗಿಯಲ್ಲೇ ವಿದ್ಯಾಭ್ಯಾಸ ಮಾಡಿದ್ದ ಸ್ಪರ್ಶಾ ನಂತರ ಬೆಂಗಳೂರಿನಲ್ಲಿ ಪದವಿ ಮುಗಿಸಿ ದೆಹಲಿಯಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ ಪಡೆದಿದ್ದರು.

ಕಲಬುರ್ಗಿಯ ಡಾ.ಶರಣಪ್ಪ ನೀಲಂಗಿ ಹಾಗೂ ಪಾರ್ವತಿ ದಂಪತಿಯ ಪುತ್ರಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು