ಭಾನುವಾರ, ಅಕ್ಟೋಬರ್ 25, 2020
22 °C

ಪರಿಶಿಷ್ಟರ ಸಬ್ಸಿಡಿ ಅನುದಾನಕ್ಕೆ ಕಡಿತ ಬೇಡ: ಶಾಸಕರ ಎದುರು ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಸಬಲೀಕರಣಕ್ಕಾಗಿ ಜಾರಿಯಾಗಿರುಂವ ಉದ್ಯಮಶೀಲತಾ ಯೋಜನೆಯ ಸಹಾಯಧನ ವನ್ನು ₹ 5 ಲಕ್ಷದಿಂದ ₹ 1 ಲಕ್ಷಕ್ಕೆ ಇಳಿಕೆ ಮಾಡಿರುವುದನ್ನು ಸದನದಲ್ಲಿ ಪ್ರಶ್ನಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಕಾರ್ಯಕರ್ತರು ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಮನೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಮೈಕ್ರೊ ಕ್ರೆಡಿಟ್ ಯೋಜನೆಗಳ ಮೂಲಕ ನಿರುದ್ಯೋಗಿಗಳಿಗೆ ಅನುಕೂಲವಾಗಿ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೀಡಲಾಗುತ್ತಿರುವ ₹ 5 ಲಕ್ಷ ಹಾಗೂ ₹ 3.5 ಲಕ್ಷ ಮೊತ್ತದ ಸಹಾಯಧನವನ್ನು ₹ 1 ಲಕ್ಷಕ್ಕೆ ಇಳಿಸಿರುವ ರಾಜ್ಯ ಸರ್ಕಾರದ ನಿರ್ಧಾರ ದಲಿತರ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಸಮಿತಿ ಸಂಚಾಲಕ ಅರ್ಜುನ ಭದ್ರೆ ಅಸಮಾಧಾನ ವ್ಯಕ್ತಪಡಿಸಿದರು.

ಈ ಮೊದಲಿದ್ದ ಸಬ್ಸಿಡಿ ಪದ್ಧತಿ ಮುಂದುವರಿಸಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಪ್ರಬಲ ಹೋರಾಟ ಮಾಡಬೇಕಾಗುತ್ತದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು