ವಿವಿಧ ಬೇಡಿಕೆ: ಪ್ರತಿಭಟನೆ

7

ವಿವಿಧ ಬೇಡಿಕೆ: ಪ್ರತಿಭಟನೆ

Published:
Updated:
Deccan Herald

ಕಲಬುರ್ಗಿ: ಸಮಾನ ಶಿಕ್ಷಣ ನೀತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ಮಾಡಿದರು.

ವಿದ್ಯೆಯ ವ್ಯಾಪಾರೀಕರಣ ತಡೆಗಟ್ಟಬೇಕು. ರಾಜ್ಯ ಸರ್ಕಾರಿ ಸೇವೆಯಲ್ಲಿನ ಹೊರಗುತ್ತಿಗೆ ಪದ್ಧತಿಯನ್ನು ಕೂಡಲೇ ರದ್ದುಪಡಿಸಬೇಕು. ಆ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಮೂಲಕ ನಿರುದ್ಯೋಗಿಗಳಿಗೆ ನೆರವಾಗಬೇಕು. ಅನುಸೂಚಿತ ಜಾತಿ–ಪಂಗಡಗಳ ಉಪಯೋಜನೆ ಕಾಯ್ದೆಗೆ ತಿದ್ದುಪಡಿ ತಂದು, ಅವರಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣಕ್ಕೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವೈಜ್ಞಾನಿಕ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಭೂ ರಹಿತ ಕೃಷಿ ಕೂಲಿಕಾರರಿಗೆ ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಹಂಚಿಕೆ ಮಾಡಬೇಕು. ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಗಾಯಕವಾಡ, ವಿಭಾಗೀಯ ಅಧ್ಯಕ್ಷ ಸೈಬಣ್ಣ ಶಿರವಾಳ, ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಣ್ಣ ಕೋಣೆಕರ್, ರಾಣು ಮುದ್ದನಕರ್, ಮಲ್ಲಿಕಾರ್ಜುನ ಖನ್ನಾ, ರಾಮಚಂದ್ರ ಧರೆನ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !