ಭಾನುವಾರ, ಡಿಸೆಂಬರ್ 6, 2020
22 °C

ಅತಿವೃಷ್ಟಿ: ಪರಿಹಾರಕ್ಕೆ ಒತ್ತಾಯಿಸಿ ವಾಟಾಳ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದ ಕಲಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಕ್ಷಣ ಪರಿಹಾರವಾಗಿ ₹ 50 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರವಾಹದಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದ್ದರೂ ಸರ್ಕಾರ ಕೈಕೊಟ್ಟು ಕುಳಿತಿದ್ದು, ಪರಿಹಾರ ನೀಡುವ ಮಾತನ್ನು ಆಡುತ್ತಿಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಸಲ್ಲದು. ತೀವ್ರ ಸ್ವರೂಪದ ನಷ್ಟವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ. ಕೂಡಲೇ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಬರಬೇಕು. ಕೇಂದ್ರದಿಂದ ಹೆಚ್ಚಿನ ಪ್ರಮಾಣದ ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪರ ಸಂಘಟನೆಗಳ ಮುಖಂಡರಾದ ಮಂಜುನಾಥ ನಾಲವಾರಕರ, ಸಚಿನ್ ಫರಹತಾಬಾದ್, ರವಿ ದೇಗಾಂವ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು