ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನರಿಬೋಳ: ವೀರಭದ್ರೇಶ್ವರ ಪುರಾಣ

Published 30 ಮಾರ್ಚ್ 2024, 14:45 IST
Last Updated 30 ಮಾರ್ಚ್ 2024, 14:45 IST
ಅಕ್ಷರ ಗಾತ್ರ

ಜೇವರ್ಗಿ: ತಾಲೂಕಿನ ನರಿಬೋಳ ಗ್ರಾಮದ ವೀರಭದ್ರೇಶ್ವರರ 52ನೇ ಜಾತ್ರಾ ಮಹೋತ್ಸವದ ಅಂಗವಾಗಿ ಏ.3ರಿಂದ ಏ.13ರವರೆಗೆ ನಿತ್ಯ ಸಂಜೆ 7 ಗಂಟೆಗೆ ವೀರಭದ್ರೇಶ್ವರರ ಪುರಾಣ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಸದ್ಭಕ್ತ ಮಂಡಳಿ ತಿಳಿಸಿದೆ.

ವೀರಭದ್ರೇಶ್ವರ ಮಠದ ಪೀಠಾಧಿಪತಿ ಶಿವಪುತ್ರಯ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶಿವಬಸಯ್ಯ ಶಾಸ್ತ್ರಿ ಪುರಾಣ, ಮಹೇಶಕುಮಾರ ಹೇರೂರ, ಶರಣಬಸವ ದೇಸಾಯಿ ಕೆಲ್ಲೂರ ಸಂಗೀತ ಸೇವೆ ಸಲ್ಲಿಸಲಿದ್ದಾರೆ.

ಏ.14 ರಂದು ಸಂಜೆ 6ಕ್ಕೆ ರಥೋತ್ಸವ ಜರುಗಲಿದೆ. ರಾತ್ರಿ 9ಕ್ಕೆ ಹಾಸ್ಯ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಸದ್ಭಕ್ತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT