ಕಾಂಗ್ರೆಸ್– ಜೆಡಿಎಸ್‌ನಿಂದ ಏ.12ರಂದು ವೀರಶೈವಲಿಂಗಾಯತ ಸಮುದಾಯದ ಸಭೆ

ಬುಧವಾರ, ಏಪ್ರಿಲ್ 24, 2019
33 °C

ಕಾಂಗ್ರೆಸ್– ಜೆಡಿಎಸ್‌ನಿಂದ ಏ.12ರಂದು ವೀರಶೈವಲಿಂಗಾಯತ ಸಮುದಾಯದ ಸಭೆ

Published:
Updated:
Prajavani

ಕಲಬುರ್ಗಿ: ‘ನಗರದ ವೀರಶೈವ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಏ.12ರಂದು ಸಂಜೆ 5.30 ಗಂಟೆಗೆ ಕಾಂಗ್ರೆಸ್– ಜೆಡಿಎಸ್ ಪಕ್ಷದ ವತಿಯಿಂದ ವೀರಶೈವ ಲಿಂಗಾಯತ ಸಮುದಾಯದ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಭೀಮಣ್ಣ ಖಂಡ್ರೆ, ಗೃಹ ಸಚಿವ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಅಲ್ಲಂವೀರಭದ್ರಪ್ಪ ಭಾಗವಹಿಸಲಿದ್ದಾರೆ’ ಎಂದರು.

‘ಗುಲಬರ್ಗಾ’ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಬೇಕು. ಈ ಭಾಗದ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ. ಹೀಗಾಗಿ ಆ ಸಭೆಯಲ್ಲಿ ಖರ್ಗೆ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

‘ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲಾ ವೀರಶೈವ–ಲಿಂಗಾಯತರು ತಮ್ಮ ಪರವಾಗಿದ್ದಾರೆ ಎಂದು ಬಿಂಬಿಸುವ ಹುನ್ನಾರ ನಡೆಸಿದ್ದಾರೆ. ಅದಕ್ಕಾಗಿ ಸಭೆ ಆಯೋಜಿಸಲಾಗಿದೆ’ ಎಂದು ಹೇಳಿದರು.

‘ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ಮಾಜಿ ಅಧ್ಯಕ್ಷ ಮಹಮ್ಮದ್ ಅಸಗರ ಚುಲಬುಲ್ ಮೇಲೆ ಶಾಸಕಿ ಕನ್ನೀಜ್ ಫಾತಿಮಾ ಬೆಂಬಲಿಗರು ನಡೆಸಿರುವ ಹಲ್ಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶರಣಪ್ರಕಾಶ, ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದಷ್ಟೇ ಹೇಳಿದರು.

ಶಾಸಕ ಎಂ.ವೈ.ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ, ಮುಖಂಡರಾದ ಬಸವರಾಜ ಭೀಮಳ್ಳಿ, ಡಾ.ಭೀಮಾಶಂಕರ ಬಿಲಗುಂದಿ, ಶರಣಕುಮಾರ ಮೋದಿ, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾದ ಜಿಲ್ಲಾ ಘಟದಕ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !