ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ, ಲಿಂಗಾಯತ ವಧು ವರರ ಸಮಾವೇಶ ಜನವರಿ 8ಕ್ಕೆ

Last Updated 6 ಜನವರಿ 2023, 10:07 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲಾ ವೀರಶೈವ ಸಮಾಜದಿಂದ ಇದೇ 8ರಂದು ಬೆಳಿಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಬೃಹತ್ ವಧು–ವರರ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳ ಪಂಗಡದವರಿಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎಲ್‌ಇಡಿ ಮೂಲಕ ವಧು–ವರರ ಮಾಹಿತಿ ಪರಿಚಯಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಮಹಾರಾಷ್ಟ್ರ, ತೆಲಂಗಾಣದಿಂದಲೂ ವಧು–ವರರು ಭಾಗವಹಿಸಲಿದ್ದಾರೆ. ವಿಚ್ಛೇದನ ಆದವರೂ ಪಾಲ್ಗೊಳ್ಳಲಿದ್ದಾರೆ’ ಎಂದರು.

ಇಲ್ಲಿಯವರೆಗೆ 203 ವಧುಗಳು, 147 ವರರು ನೋಂದಾಯಿಸಿಕೊಂಡಿದ್ದು, ಸಮಾವೇಶದ ದಿನ ಇನ್ನಷ್ಟು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮುಗಳನಗಾಂವ ಕಟ್ಟಿಮನಿ ಸಂಸ್ಥಾನದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸ್ನ್ ದಾಕ್ಷಾಯಿಣಿ ಎಸ್.ಅಪ್ಪ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಶರಣಬಸಪ್ಪ ದರ್ಶನಾಪುರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ಜಿ. ನಮೋಶಿ, ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಬಿಜೆಪಿ ಮುಖಂಡ ಶಿವಕಾಂತ ಮಹಾಜನ್, ನಾಗಯ್ಯ ಮಠ, ನಿಜಲಿಂಗ ಚಂದ್ರಕಂಠಿ, ಚಂದ್ರಶೇಖರ ಕಕ್ಕೇರಿ,ವೀರೇಶ ಗಂಧಮಠ, ಧನರಾಜ ಮೀನಕೇರಾ, ಕಲ್ಯಾಣರಾವ್ ಯಲಮಡಗಿ, ಪ್ರಭಾವತಿ ಶೆಟ್ಟಿ, ಸುವರ್ಣಾ ಮಠಪತಿ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕಲ್ಯಾಣಪ್ಪ ಪಾಟೀಲ ಮಳಖೇಡ, ಶ್ರೀಶೈಲ ಘೂಳಿ, ಚಂದ್ರಶೇಖರ ಕಕ್ಕೇರಿ, ವೀರೇಶ ಗಂಧಮಠ ಇತರರು ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT