ಕಲಬುರಗಿ: ‘ಕೇಂದ್ರ ಸರ್ಕಾರವು ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತಿದೆ’ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಂಚಲಕ ಮಹಮ್ಮುದ್ ಅಸಗರ್ ಚುಲ್ಬುಲ್ ಹೇಳಿದರು.

‘ಆಡಳಿತರೂಢ ಬಿಜೆಪಿ ತನ್ನ ಸಂಖ್ಯಾ ಬಲವನ್ನು ಬಳಸಿಕೊಂಡು, ಲಕ್ಷಾಂತರ ಮುಸ್ಲಿಮರು ಹಾಗೂ ಅಲ್ಪಸಂಖ್ಯಾತರ ಇಚ್ಛೆಗೆ ವಿರುದ್ಧವಾಗಿ ವಕ್ಫ್ ಕಾಯ್ದೆಗೆ ಅನಿಯಂತ್ರಿತ ತಿದ್ದುಪಡಿ ಮಾಡಿ ಅಂಗೀಕರಿಸಿದೆ. ನಾವು ಈ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ದೇಶದಾದ್ಯಂತ ಲಕ್ಷಾಂತರ ಮುಸ್ಲಿಮರು ವಕ್ಫ್ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಇ–ಮೇಲ್ಗಳನ್ನು ಕಳುಹಿಸಿದ್ದಾರೆ. ಆದರೂ ಪ್ರಜಾಪ್ರಭುತ್ವ ಮತ್ತು ಸಂಸದೀಯ ಮಾನದಂಡಗಳನ್ನು ಧಿಕ್ಕರಿಸಿ, ಆಕ್ಷೇಪಣೆಗಳನ್ನು ನಿರ್ಲಕ್ಷಿಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸಮಿತಿಯ ಸಂಚಾಲಕ ಸುಲೇಮಾನ್ ಖಾನ್ ಮಾತನಾಡಿ, ‘ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. ಈಗ ಇದನ್ನು ಜನರ ನಡುವೆ ತೆಗೆದುಕೊಂಡು ಹೋಗುತ್ತಿದ್ದೇವೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜಾಕೀರ್ ಹುಸೇನ್, ಮೌಲಾನಾ ಫಕ್ರೊದ್ದೀನ್, ಮೌಲಾನಾ ಅಜಮತ್ ಫಾರೂಕಿ, ಮೌಲಾನಾ ಗೌಸುದ್ದೀನ್ ಖಾಸಿಂ, ರಿಜ್ವಾನ್ ಸಿದ್ದೀಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.