ಭಾನುವಾರ, ಮೇ 16, 2021
28 °C

ಕೋವಿಡ್ ಕೇಂದ್ರ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಚಿಂಚೋಳಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಲಾಗಿರುವ ಕೊರೊನಾ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ್ ವೈಜನಾಥ ಪಾಟೀಲ ಭೇಟಿ ನೀಡಿ, ಪರಿಶೀಲಿಸಿದರು.

ತಾಲ್ಲೂಕಿಗೆ ಬಂದಿರುವ ಆಮ್ಲಜನಕ ತಯಾರಿಕಾ ಘಟಕವನ್ನು ಅತಿಶೀಘ್ರದಲ್ಲಿ ಪ್ರಾರಂಭಿಸಿ ರೋಗಿಗಳಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು. ಕೆಲವೇ ದಿನಗಳಲ್ಲಿ ಕೊರೊನಾ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.

ಅಂಬೇಡ್ಕರ್ ಹಾಗೂ ದೇವರಾಜ ಅರಸು ವಸತಿ ನಿಲಯಗಳನ್ನು ಕೋವಿಡ್‌ ಕೇಂದ್ರಗಳಾಗಿ ಪರಿವರ್ತಿಸುವಂತೆ ಸೂಚಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಗಡಂತಿ, ಭವಾನಿ ರಾವ್ ಪಾಟೀಲ, ಶೇಷಗಿರಿ ಕಳಸಕರ, ಜಗದೀಶ್ ಠಾಕೂರ್, ಸಂತೋಷ ರೆಡ್ಡಿ, ಚಂದ್ರಪ್ಪ ಚಂದನಕೇರ, ರವಿ ಪಾಟೀಲ ಶಾದಿಪುರ, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಡಿ. ಗಫರ್, ಡಾ.ಸಂತೋಷ ಪಾಟೀಲ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು